ರಾಯಚೂರು : ರಸ್ತೆ ಬದಿ ನಿಂತಾಗ ಬಸ್ ಒಂದು ರಸ್ತೆ ಮೇಲೆ ಚಲಿಸುವಾಗ ಯುವಕನಿಗೆ ಕೆಸರು ಸಿಡಿದಿದೆ. ಈ ವೇಳೆ ಯುವಕ ಹಾಗೂ ಬಸ್ ಚಾಲಕನ ನಡುವೆ ಮಾತಿನ ಚಕಮಕಿ ನಡೆದಿದೆ. ನನ್ನ ಮೇಲೆ ಕೇಸ್ ಹಾಕುತ್ತಾರೆ ಎಂದು ಹೆದರಿದ ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸುಗೂಡು ತಾಲೂಕಿನಲ್ಲಿ ನಡೆದಿದೆ.
ತಾಲ್ಲೂಕಿನ ಹುನುಕುಂಟಿ ಗ್ರಾಮದ ಮುತ್ತಣ್ಣ ದೇವಪ್ಪ ಕುರಿ (18) ನೇಣಿಗೆ ಶರಣಾದ ಯುವಕನಾಗಿದ್ದಾನೆ. ಮೃತ ಯುವಕನ ಕುಟಂಬಸ್ಥರು ಹಾಗೂ ಗ್ರಾಮಸ್ಥರು ಪಟ್ಟಣದ ಸಾರಿಗೆ ಘಟಕದ ಎದುರು ಶವವಿಟ್ಟು ಪ್ರತಿಭಟನೆ ನಡೆಸಿದರು. ಪೊಲೀಸ್ ಬಿಗಿ ಬಂದೋಬಸ್ತ್ ಒದಗಿಸಲಾಗಿದೆ. ಕೆಲವೊತ್ತು ವಾತಾವರಣ ಬಿಗುವಿನಿಂದ ಕೂಡಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಕುಟುಂಬಸ್ಥರ ಮವೊಲಿಸಿಲು ಯಶಸ್ವಿಯಾದರು.