ಬೆಂಗಳೂರು : ರಾಜ್ಯದಲ್ಲಿ ಇದೀಗ ಕೊರೋನಾ ಎರಡನೇ ರೂಪಾಂತರಿ ಹೊಸ ತಳಿ ಎಂಟ್ರಿ ಕೊಟ್ಟಿದ್ದು, ಇಂದು ಬೆಳಗಾವಿಯಲ್ಲಿ 70 ವರ್ಷದ ವೃದ್ಧರೊಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಅಲ್ಲದೆ ಇಂದು ರಾಜ್ಯದಲ್ಲಿ ಒಟ್ಟು 42 ಹೊಸ ಕರೋನ ಪ್ರಕರಣಗಳು ದಾಖಲಾಗಿವೆ.
ಹೌದು ರಾಜ್ಯದಲ್ಲಿ ಇಂದು 42 ಕೊರೊನ ಪ್ರಕರಣಗಳು ದಾಖಲಾಗಿದ್ದು, ಸೋಂಕಿತರ ಸಂಖ್ಯೆ 253ಕ್ಕೆ ಏರಿಕೆಯಾಗಿದೆ. ಅಲ್ಲದೇ ಕೊರೊನ ಸಕ್ರಿಯ ಪ್ರಕರಣಗಳ ಸಂಖ್ಯೆ 148 ಇದ್ದು, ರಾಜ್ಯದಲ್ಲಿ ಇದುವರೆಗೂ ಕೊರೊನಗೆ ಬಲಿಯಾದವರ ಸಂಖ್ಯೆ 2ಕ್ಕೆ ಏರಿಕೆಯಾಗಿದೆ.