Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ದೆಹಲಿ ಮೇಯರ್ ಕಚೇರಿ, ನ್ಯಾಯಾಲಯಗಳು ಮತ್ತು ರೈಲ್ವೆ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ: ‘ಖಲಿಸ್ತಾನ್ ನ್ಯಾಷನಲ್ ಆರ್ಮಿ’ಯಿಂದ ಇ-ಮೇಲ್ ಸಂದೇಶ

ಜನಸಾಮಾನ್ಯರಿಗೆ ಬಿಗ್ ರಿಲೀಫ್ : ಈ ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆ.!

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ತನಿಖೆ ಪೂರ್ಣಗೊಳಿಸಿದ ಸಿಬಿಐ, ಪರೀಕ್ಷಾ ವ್ಯವಸ್ಥೆಯಲ್ಲಿ ಆಮೂಲಾಗ್ರ ಸುಧಾರಣೆಗೆ ಶಿಫಾರಸು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಸಾಲ ಪಾವತಿಸದೇ ಸಹಕಾರಿ ಬ್ಯಾಂಕ್ ಗೆ ವಂಚನೆ ಆರೋಪ : ರಮೇಶ್ ಜಾರಕಿಹೊಳಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ
KARNATAKA

BREAKING : ಸಾಲ ಪಾವತಿಸದೇ ಸಹಕಾರಿ ಬ್ಯಾಂಕ್ ಗೆ ವಂಚನೆ ಆರೋಪ : ರಮೇಶ್ ಜಾರಕಿಹೊಳಿ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

By ಸುರೇಶ್‌

ಬೆಂಗಳೂರು : ಕೋಟ್ಯಂತರ ಪಡೆದು ಸಾಲ ಪಾವತಿಸದೇ ಸಹಕಾರಿ ಬ್ಯಾಂಕ್ ಗೆ ವಂಚನೆ ಎಸಗಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಸೇರಿದಂತೆ ಮೂವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಯಿತು.

ಹೌದು ಸಿಐಡಿ ಪೋಲಿಸರಿಂದ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟಿಗೆ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಯಿತು. ಸೌಭಾಗ್ಯಲಕ್ಷ್ಮಿ ಶುಗರ್ಸ ಲಿಮಿಟೆಡ್ ಕಂಪನಿಗೆ ಅಪೇಕ್ಸ್ ಬ್ಯಾಂಕ್ ಸಾಲ ನೀಡಿತ್ತು. 232 ಕೋಟಿ 88 ಲಕ್ಷ ರೂಪಾಯಿ ಸಾಲ ಪಡೆದು ಮರುಪಾವತಿಸದ ಹಿನ್ನೆಲೆಯಲ್ಲಿ ಅಪೇಕ್ಸ್ ಬ್ಯಾಂಕ್ ದೂರಿನ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಬ್ಯಾಂಕಿನ ಪರವಾಗಿ ಸಾಲಕ್ಕೆ ರಮೇಶ್ ಜಾರಕಿಹೊಳಿ ಗ್ಯಾರಂಟರ್ ಆಗಿದ್ದರು.

ಪ್ರಕರಣದ ಹಿನ್ನೆಲೆ

ಕರ್ನಾಟಕ ಸಹಕಾರ ಬ್ಯಾಂಕ್‌ನಿಂದ ಸೌಭಾಗ್ಯಲಕ್ಷ್ಮೀ ಶುಗರ್ಸ್‌ ಲಿಮಿಟೆಡ್‌ ಪರವಾಗಿ ರಮೇಶ್ ಜಾರಕಿಹೊಳಿ 439 ಕೋಟಿ ಸಾಲ ಪಡೆದಿದ್ದರು. ನಂತರ ಸಾಲ ಪಡೆದ ಸಂದರ್ಭದಲ್ಲಿ ಬ್ಯಾಂಕ್‌ ವಿಧಿಸಿದ್ದ ಷರತ್ತುಗಳನ್ನು ಉಲ್ಲಂಘಿಸಿ ಸೌಭಾಗ್ಯಲಕ್ಷ್ಮೀ ಶುಗರ್ಸ್‌ ಲಿಮಿಟೆಡ್​ನ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಸಂಬಂಧ ಅರ್ಜಿದಾರ ರಮೇಶ್‌ ಜಾರಕಿಹೊಳಿ, ವಸಂತ್‌ ವಿ.ಪಾಟೀಲ್‌ ಮತ್ತು ಶಂಕರ್‌ ಪಾವಡೆ ಎಂಬುವರ ವಿರುದ್ಧ ಬೆಂಗಳೂರಿನ ವಿಶ್ವೇಶ್ವರ ಪುರಂ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ಪೊಲೀಸರು ಐಪಿಸಿ 406, 420 ಮತ್ತು 34ರ ಅಡಿಯಲ್ಲಿ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ.

ಅರ್ಜಿ ಸಂಬಂಧ ನಡೆದ ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಸೌಭಾಗ್ಯ ಲಕ್ಷ್ಮೀ ಶುಗರ್ಸ್‌ ಲಿಮಿಟೆಡ್‌ ನಿರ್ದೇಶಕರ ಸ್ಥಾನಕ್ಕೆ ಅರ್ಜಿದಾರ ರಮೇಶ್‌ ಜಾರಕಿಹೊಳಿ ರಾಜೀನಾಮೆ ನೀಡಿದ್ದಾರೆ. ಸಾಲ ಪಡೆದ ಸಂದರ್ಭದಲ್ಲಿ ನಿರ್ದೇಶಕರಾಗಿದ್ದು, ಬಳಿಕ ಸಾಲ ಮರು ಪಾವತಿಗೂ ಮುನ್ನ ನಿರ್ದೇಶಕರ ಸ್ಥಾನಕ್ಕೆ ರಾಜೀನಾಮೆ ನೀಡಿರುವುದೇ ಅಪರಾಧ ಎಂಬುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಪಡೆದ ಸಾಲವನ್ನು ಮರು ಪಾವತಿ ಮಾಡುವವರೆಗೂ ಅವರು ಖಾತರಿದಾರರಾಗಿ ಮುಂದುವರೆಯಲಿದ್ದಾರೆ. ಅದಕ್ಕೆ ಸಂಬಂಧಿಸಿದಂತೆ ಭರವಸೆಯನ್ನೂ ನೀಡಿದ್ದಾರೆ. ಆದರೆ, ಕಂಪೆನಿಯ ನಿರ್ದೇಶಕರಾಗಿರುವುದಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಿರ್ದೇಶಕರಾಗಿರದಿದ್ದರೂ, ಪಡೆದ ಸಾಲಕ್ಕೆ ಜವಾಬ್ದಾರರಾಗಿ ಹೊಣೆಗಾರರಾಗಿರುತ್ತಾರೆ ಎಂಬುದಾಗಿ ಸಾಲ ನೀಡಿದ ಸಂದರ್ಭದಲ್ಲಿ ಹೇಳಲಾಗಿದೆ ಎಂದು ವಿವರಿಸಿದರು.

Share. Facebook Twitter LinkedIn WhatsApp Email

Related Posts

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

3 Mins Read

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಸೇವಾಸಿಂಧು ಫೋರ್ಟಲ್ ಮೂಲಕ `ಬಸ್ ಪಾಸ್‍’ಗೆ ಅರ್ಜಿ ಆಹ್ವಾನ

2 Mins Read

BIG NEWS : `RCB’ ಟ್ರೋಫಿ ಕಾಲ್ತುಳಿತದ ಮೃತರಿಗೆ ಅರ್ಪಣೆ : ನಾಯಕ ರಜತ್ ಪಾಟೀದಾರ್ ಘೋಷಣೆ.!

1 Min Read
Recent News

BREAKING: ದೆಹಲಿ ಮೇಯರ್ ಕಚೇರಿ, ನ್ಯಾಯಾಲಯಗಳು ಮತ್ತು ರೈಲ್ವೆ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ: ‘ಖಲಿಸ್ತಾನ್ ನ್ಯಾಷನಲ್ ಆರ್ಮಿ’ಯಿಂದ ಇ-ಮೇಲ್ ಸಂದೇಶ

ಜನಸಾಮಾನ್ಯರಿಗೆ ಬಿಗ್ ರಿಲೀಫ್ : ಈ ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆ.!

NEET-UG 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ: ತನಿಖೆ ಪೂರ್ಣಗೊಳಿಸಿದ ಸಿಬಿಐ, ಪರೀಕ್ಷಾ ವ್ಯವಸ್ಥೆಯಲ್ಲಿ ಆಮೂಲಾಗ್ರ ಸುಧಾರಣೆಗೆ ಶಿಫಾರಸು

​ಜೂನ್ 8ರಂದು ‘ಇಂಡಿಯಾ’ ಮೈತ್ರಿಕೂಟದ ಮಹತ್ವದ ಸಭೆ: ರಾಜಕೀಯ ತಂತ್ರಗಾರಿಕೆ ರೂಪಿಸಲು ಸಜ್ಜಾದ ವಿರೋಧ ಪಕ್ಷಗಳು

State News
KARNATAKA

ಸಾರ್ವಜನಿಕರೇ ಗಮನಿಸಿ : ನಿಮ್ಮ ಮೊಬೈಲ್ ನಲ್ಲಿ ಇರಲೇಬೇಕು ಈ 12 ಸರ್ಕಾರಿ ಆ್ಯಪ್‌ ಗಳು | Government Apps

By kannadanewsnow57 KARNATAKA 3 Mins Read

ಬೆಂಗಳೂರು: ದೇಶದ ನಾಗರಿಕರಿಗೆ ಸರ್ಕಾರದ ಸೇವೆಗಳನ್ನು ಇನ್ನಷ್ಟು ಸುಲಭವಾಗಿ ತಲುಪಿಸಲು ಮತ್ತು ಕಾಗದದ ಬಳಕೆಯನ್ನು ಕಡಿಮೆ ಮಾಡಲು ಭಾರತ ಸರ್ಕಾರವು…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : ಸೇವಾಸಿಂಧು ಫೋರ್ಟಲ್ ಮೂಲಕ `ಬಸ್ ಪಾಸ್‍’ಗೆ ಅರ್ಜಿ ಆಹ್ವಾನ

BIG NEWS : `RCB’ ಟ್ರೋಫಿ ಕಾಲ್ತುಳಿತದ ಮೃತರಿಗೆ ಅರ್ಪಣೆ : ನಾಯಕ ರಜತ್ ಪಾಟೀದಾರ್ ಘೋಷಣೆ.!

ಗೃಹಲಕ್ಷ್ಮಿ ಹಣದಿಂದ 40 ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಬ್ಯಾಗ್ ಕೊಡಿಸಿದ `SDMC’ ಸದಸ್ಯೆಯರು!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.