ಬೆಂಗಳೂರು : ಪದ್ಮಶ್ರೀ, ಪದ್ಮಭೂಷಣ ಪ್ರಶಸ್ತಿ ಪಡೆದ ಕನ್ನಡದ ಹಿರಿಯ ಖ್ಯಾತ ಸಾಹಿತಿ ಎಸ್ಎಲ್ ಭೈರಪ್ಪ (94) ನಿಧನರಾಗಿದ್ದು ಇದೀಗ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿದ್ದು ಸಿಎಂ ಸಿದ್ದರಾಮಯ್ಯ ಅವರು ಎಸ್ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ನಿನ್ನೆ ರಾಜಾಜಿನಗರದ ರಾಷ್ಟ್ರೋತ್ಥಾನ ಆಸ್ಪತ್ರೆಯಲ್ಲಿ ಎಸ್ಎಲ್ ಭೈರಪ್ಪ ನಿಧನರಾಗಿದರು.
ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಶಿವರಾಜ ತಂಗಡಗಿ ಸೇರಿದಂತೆ ಹಲವು ಗಣ್ಯರು ಎಸ್ ಎಲ್ ಭೈರಪ್ಪ ಅವರ ಅಂತಿಮ ದರ್ಶನ ಪಡೆದರು. ಬಳಿಕ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿದರು. ಇಂದು ಸಂಜೆ ಮೈಸೂರಿಗೆ ಭೈರಪ್ಪ ಅವರ ಪಾರ್ಥಿವ ಶರೀರ ಸ್ಥಳಾಂತರಿಸಲಾಗುತ್ತದೆ. ನಾಳೆ ಮೈಸೂರು ಬೆಟ್ಟದ ತಪ್ಪಲಿನ ರುದ್ರ ಭೂಮಿಯಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಎಸ್ಎಲ್ ಭೈರಪ್ಪ ಅವರ ಅಂತ್ಯಕ್ರಿಯೆ ನೆರವೇರಲಿದೆ.