ಬೆಂಗಳೂರು : ಇಂದು ರಾಜ್ಯ ಸರ್ಕಾರದ ಮಹತ್ವದ ಆಶಾಕಿರಣ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾವೇರಿಯಲ್ಲಿ ಚಾಲನೆ ನೀಡಲಿದ್ದಾರೆ. ಇದರಿಂದ ಸುಮಾರು 2.45 ಲಕ್ಷ ಜನರು ಉಚಿತ ಕನ್ನಡಕವನ್ನು ಪಡೆಯಲಿದ್ದಾರೆ ಎಂದು ಸಚಿವ ದಿನೇಶ್ ಗುಂಡೂರವ್ ತಿಳಿಸಿದರು.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಎಲ್ಲಾ ವಯೋಮಾನದವರಿಗೆ ಉಚಿತ ಕಣ್ಣಿನ ತಪಾಸಣೆ ನಡೆಸಿ ದೃಷ್ಟಿ ದೋಷ ನಿವಾರಣೆ ಉದ್ದೇಶವನ್ನು ಹೊಂದಿರುವ ಸರ್ಕಾರದ ಮಹತ್ವಾಕಾಂಕ್ಷೆಯ ‘ಆಶಾಕಿರಣ- ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ ಎಂಬ ಯೋಜನೆಯ ಕಾರ್ಯಕ್ರಮಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾವೇರಿಯಲ್ಲಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
‘ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ’ ಎನ್ನುವ ಧ್ಯೇಯ ವಾಕ್ಯದಡಿ ಯೋಜನೆಯೂ ಮಗುವಿನಿಂದ ಹಿಡಿದು ಎಲ್ಲಾ ವಯೋಮಾನದವರಿಗೆ ಕಣ್ಣಿನ ತಪಾಸನೆ ಮಾಡಲಾಗುತ್ತದೆ. ಮೊದಲ ಹಂತದಲ್ಲಿ ಚಿಕ್ಕಬಳ್ಳಾಪುರ, ಕಲಬುರಗಿ, ಚಾಮರಾಜನಗರ, ಹಾವೇರಿ ಎರಡನೇ ಹಂತದಲ್ಲಿ ಚಿತ್ರದುರ್ಗ, ಮಂಡ್ಯ, ರಾಯಚೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಚಾಲನೆ ನೀಡಲಾಗುತ್ತದೆ.
‘KAS ಹುದ್ದೆ ಆಕಾಂಕ್ಷಿ’ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ‘504 ಹುದ್ದೆ’ ಭರ್ತಿಗೆ ಗ್ರೀನ್ ಸಿಗ್ನಲ್
‘ರಾಜ್ಯ ಸರ್ಕಾರ’ದಿಂದ ಆರೋಗ್ಯ ಇಲಾಖೆಯ ‘CHO’ಗಳಿಗೆ ಗುಡ್ ನ್ಯೂಸ್: ‘ವಾರ್ಷಿಕ ವೇತನ’ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್
ಪ್ರತಿಷ್ಠಿತ 6 ಪ್ರಶಸ್ತಿಗೆ ‘ಕರ್ನಾಟಕ ಸಾರಿಗೆ ನಿಗಮ’ ಭಾಜನ | KSRTC Award