ಚಿಕ್ಕಮಗಳೂರು : ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಇಂದು ಘೋರವಾದ ಘಟನೆ ನಡೆದಿದ್ದು, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ.
ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶೌಚಾಲಯದಲ್ಲಿ ಶಮಿತ (14) ನೇಣಿಗೆ ಶರಣಾದ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಈಕೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಮಿತಾ 9ನೇ ತರಗತಿ ಓದುತ್ತಿದ್ದಳು. ಮೂಲತಹಃ ಈಕೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಬೊಮ್ಮಲಾಪುರ ಬಳಿಯ ಹೊಕ್ಕಳಿಕೆ ನಿವಾಸಿ ಎಂದು ತಿಳಿದು ಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಕೊಪ್ಪ ತಾಲೂಕು ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.