ಚಿಕ್ಕಮಗಳೂರು : ಮೂಡಿಗೆರೆಯಲ್ಲಿ ಫೆ.13 ರಂದು ಆತ್ಮಹತ್ಯೆಗೆ ಶರಣಾಗಿದ್ದ ಸರ್ವೇಯರ್ ಶಿವಕುಮಾರ್ ಸಾವಿನ ರಹಸ್ಯ ಹೊರಬಿದ್ದಿದೆ. ಕಚೇರಿಯಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅವರು ಹನಿಟ್ರ್ಯಾಪ್‌ಗೆ ಒಳಗಾಗಿ ಆತ್ಮಹತ್ಯೆಗೆ ಶರಣಾದ್ರಾ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಈ ಕುರಿತು ಡೆತ್ ನೋಟ್ ನಲ್ಲಿ ಹಲವು ವಿಷಯಗಳನ್ನು ಅವರು ಉಲ್ಲೇಖಿಸಿದ್ದಾರೆ.ಸರ್ವೆ ಅಧಿಕಾರಿ ಶಿವಕುಮಾರ್ ಅವರು ಸಾವಿಗೂ ಮುನ್ನ ಬರೆದಿಟ್ಟಿದ್ದ ಡೆತ್ ನೋಟ್ ನಲ್ಲಿ ತನ್ನ ಸಾವಿಗೆ ಮೂವರು ಕಾರಣ ಎಂದು ಬರೆದಿಟ್ಟಿದ್ದಾರೆ.
ಸರ್ವೆಗೆ ಹೋದಾಗ ಪರಿಚಯವಾಗಿದ್ದ ಮಹಿಳೆ ಜೊತೆ ಫೋನಿನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ಶಿವಕುಮಾರ್ ಬಳಿ ಮಹಿಳೆ ಹಣಕ್ಕಾಗಿ ಪೀಡಿಸುತ್ತಿದ್ದಳು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ. ಈ ವಿಚಾರ ಎಫ್ಐಆರ್‌ನಲ್ಲಿ ಕೂಡ ಪ್ರಸ್ತಾಪವಾಗಿದೆ. ಆಕೆಗೆ ಶಿವಕುಮಾರ್ ಈಗಾಗಲೇ ಒಂದೂವರೆ ಲಕ್ಷ ರೂ. ಹಣ ನೀಡಿದ್ದರು. ಆಕೆ ಪದೇ ಪದೇ ಹಣ ಕೇಳಿದ್ದಕ್ಕೆ ಅವರು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ಮೃತ ಶಿವಕುಮಾರ್‌ಗೆ ಪತ್ನಿ ಹಾಗೂ ಮಗಳಿದ್ದು, ಮಗಳ ಓದಿಗಾಗಿ ಪತ್ನಿ ಹಾಗೂ ಮಗಳು ಬೆಂಗಳೂರಿನಲ್ಲಿ ವಾಸವಿದ್ದರು. ಮೃತ ಸರ್ವೆಯರ್ ಮೂಲತಃ ತುಮಕೂರು ಜಿಲ್ಲೆಯ ಬೆಣ್ಣೆಹಳ್ಳ ಮೂಲದವರು. ಕಳೆದ ಆರು ವರ್ಷಗಳಿಂದ ಮೂಡಿಗೆರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಡೆತ್ ನೋಟ್ ನಲ್ಲಿ ಹನಿಟ್ರ್ಯಾಪ್ ಜಾಲದಲ್ಲಿ ಸಿಲುಕಿದ್ದಾಗಿ ಬರೆದಿದ್ದಾರೆ. ಹನಿಟ್ರ್ಯಾಪ್, ಕಿರುಕುಳ, ಬ್ಲ್ಯಾಕ್ ಮೇಲ್ ಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಉಲ್ಲೇಖಿಸಿದ್ದಾರೆ. ತನ್ನ ಸಾವಿಗೆ ಮೂವರು ಕಾರಣ ಎಂದು ಬರೆದಿದ್ದಾರೆ ಎಂದು ತಿಳಿದುಬಂದಿದೆ.