ಚಿಕ್ಕಮಗಳೂರು : ಚಿಕ್ಕಮಂಗಳೂರಿನಲ್ಲಿ ಭೀಕರವಾದ ಕೊಲೆಯಾಗಿದ್ದು, ತಂದೆಯ ಆಸ್ತಿಗಾಗಿ ಅಕ್ಕ ಮತ್ತು ತಮ್ಮನ ನಡುವೆ ಗಲಾಟೆ ನಡೆದಿದೆ. ಈ ವೇಳೆ ತಮ್ಮ ಅಕ್ಕನಿಗೆ ಕೆಲವು ಕೆಟ್ಟ ಪದಗಳಿಂದ ಬೈದಿದ್ದಾನೆ. ಇದರಿಂದ ಸಿಟ್ಟಿಗೆದ್ದ ಅಕ್ಕನ ಮಗ ಸ್ವಂತ ಸೋದರಮಾವನ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ ಚಿಕ್ಕಮಂಗಳೂರು ಜಿಲ್ಲೆಯ ಕಡೂರು ತಾಲೂಕಿನ ಪಂಚನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹತ್ಯೆಯಾದ ವ್ಯಕ್ತಿಯನ್ನು ಗ್ರಾಮದ ಸಿದ್ದರಾಮೇಗೌಡ ಎಂದು ತಿಳಿದುಬಂದಿದ್ದು, ಇನ್ನು ಸಿದ್ದರಾಮೇಗೌಡನ ಅಕ್ಕನ ಮಗ ಸಂಜಯ್ ಕೊಲೆ ಮಾಡಿರುವ ಆರೋಪಿ ಎಂದು ತಿಳಿದುಬಂದಿದೆ. ಸಿದ್ದರಾಮೇಗೌಡ ಮತ್ತು ಆತನ ಅಕ್ಕ ನಿರ್ಮಲ ನಡುವೆ 26 ಎಕರೆ ತೆಂಗಿನ ತೋಟ, 24 ವಾಣಿಜ್ಯ ಮಳಿಗೆ, ಸೈಟ್ ವಿಚಾರವಾಗಿ ವಿವಾದವಿತ್ತು. ತಂದೆಯ ಆಸ್ತಿಗಾಗಿ ನಿರ್ಮಲ ನ್ಯಾಯಾಲಯದಲ್ಲಿ ದಾವೆ ಕೂಡ ಹೂಡಿದ್ದರು. ಇದೇ ವಿಚಾರವಾಗಿ ಗಲಾಟೆ ನಡೆದಿತ್ತು.
ಗಲಾಟೆ ವೇಳೆ ಸಿದ್ದರಾಮೇಗೌಡ ಅಕ್ಕನನ್ನು ಕೆಟ್ಟ ಪದಗಳಿಂದ ಬೈದಿದ್ದ, ಇದನ್ನೇ ಮನಸ್ಸಿನಲ್ಲಿ ಇಟ್ಟುಕೊಂಡ ಅಕ್ಕನ ಮಗ ಸಂಜಯ್ ಮರ್ಡರ್ ಪ್ಲಾನ್ ಮಾಡಿದ್ದ. ಅದರಂತೆ ಮಾರ್ಚ್ 14 ರ ಸಂಜೆ ಪಂಚನಹಳ್ಳಿ ಗ್ರಾಮಕ್ಕೆ ಬಂದಿದ್ದ. ಮಾವ ಸಿದ್ದರಾಮೇಗೌಡನ ಜೊತೆ ಕೂತು ಎಣ್ಣೆ ಹೊಡೆದಿದ್ದಾನೆ. ಈ ವೇಳೆ ತನ್ನ ತಾಯಿಗೆ ಬೈದಿದ್ದರ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ಆಗಿದೆ. ಈ ವೇಳೆ ಡ್ರಿಪ್ ವೈರ್ ನಿಂದ ಕುತ್ತಿಗೆ ಬಿಗಿದು ಸಂಜಯ್ ಮಾವನನ್ನೇ ಕೊಲೆ ಮಾಡಿ ಪರಾರಿಯಾಗಿದ್ದಾನೆ.