ದಾವಣಗೆರೆ : ವಚನಾನಂದ ಸ್ವಾಮೀಜಿ ವಿರುದ್ಧ ಮಕ್ಕಳ ಮೇಲೆ ದೌರ್ಜನ್ಯ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ವಚನಾನಂದ ಶ್ರೀಗಳ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
ದಾವಣಗೆರೆ ಜಿಲ್ಲೆಯ ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ದಾವಣಗೆರೆ ವಿಶೇಷ ಜಿಲ್ಲಾ ಕೋರ್ಟ್ ಆದೇಶ ಹೊರಡಿಸಿದೆ.
ವಚನಾನಂದ ಸ್ವಾಮೀಜಿಗೆ ಹಲವು ಷರತ್ತುಗಳನ್ನು ವಿಧಿಸಿ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದು, ಸಾಕ್ಷಿಗಳಿಗೆ ಬೆದರಿಕೆ ಹಾಕಬಾರದು, ಕೋರ್ಟ್ ಅನುಮತಿ ಇಲ್ಲದೆ ವ್ಯಾಪ್ತಿ ಬಿಟ್ಟು ಹೋಗಬಾರದು ಎಂದು ಷರತ್ತು ವಿಧಿಸಿ ಕೋರ್ಟ್ ಜಾಮೀನು ಮಂಜೂರು ಮಾಡಿದೆ.








