ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿಯಲ್ಲಿ ಆರ್ ಸಿ ಬಿ ಚಾಂಪಿಯನ್ಸ್ ಸಂಭ್ರಮಾಚರಣೆಯ ಸಂದರ್ಭದಲ್ಲಿ ಕಾಲ್ತುಳಿತ ಉಂಟಾಗಿ 11 ಜನರು ಸಾವನ್ನಪ್ಪಿದ್ದಾರೆ. ಅಲ್ಲದೇ 33 ಜನರು ಗಾಯಗೊಂಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುಳಿತಕ್ಕೆ ಆರ್ಸಿಬಿ-ಕೆಎಸ್ಸಿಎ ಆಘಾತ ವ್ಯಕ್ತಪಡಿಸಿದ್ದು, ಮೃತಪಟ್ಟ ವ್ಯಕ್ತಿಗಳ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಘಟನೆಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಸ್ಥರಿಗೆ 10 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.