ಚಿತ್ರದುರ್ಗ : ಚಿತ್ರದುರ್ಗದಲ್ಲಿ ಭೀಕರವಾದಂತಹ ಕೊಲೆಯಾಗಿದ್ದು, ಪ್ರೀತಿಸಿ ಮದುವೆಯಾಗಿದ್ದ ಯುವಕನನ್ನು, ಯುವತಿಯ ಮನೆಯ ಸುಮಾರು 20 ಜನರು ಯುವಕನ ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಚಿತ್ರದುರ್ಗದ ಕೋಣನೂರು ಗ್ರಾಮದಲ್ಲಿ ನಡೆದಿದೆ.
ಹೌದು ಕೊಲೆಯಾದ ಯುವಕನನ್ನು ಮಂಜುನಾಥ್ ಎಂದು ತಿಳಿದು ಬಂದಿದೆ.ಇನ್ನೂ ಯುವತಿ ರಕ್ಷಿತಾ ಮನೆಯವರು ಇವರಿಬ್ಬರ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಕೂಡ ಕಳೆದ ಮೂರು ತಿಂಗಳ ಹಿಂದೆ ಇವರಿಬ್ಬರು ದೇವಸ್ಥಾನದಲ್ಲಿ ಕುಟುಂಬಸ್ಥರ ವಿರೋಧದ ನಡುವೆಯೂ ಮದುವೆಯಾಗಿದ್ದರು.
ಮಂಜುನಾಥ್ ಮೇಲೆ ಕೋಪಗೊಂಡಿದ್ದ ರಕ್ಷಿತಾ ಕುಟುಂಬ ಬುಧವಾರ ಮಧ್ಯಾಹ್ನ ಏಕಾಏಕಿ ಹಲ್ಲೆ ನಡೆಸಿದೆ. ಸುಮಾರು 20 ಮಂದಿ ಮಂಜುನಾಥ್ ಗೆ ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಮಂಜುನಾಥ್ ತಂದೆ ಚಂದ್ರಪ್ಪ ಹಾಗೂ ತಾಯಿ ಅನಸೂಯಮ್ಮಗೂ ಗಂಭೀರ ಗಾಯವಾಗಿದೆ .ಇಬ್ಬರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬ್ರಹ್ಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ