ಬೆಂಗಳೂರು : ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿ ವಂಚನೆ ಮಾಡಿದ್ದ ಆರೋಪಿಯನ್ನು ಇದೀಗ CID ಅಧಿಕಾರಿಗಳು ಬಂಧಿಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.
ಹೌದು ಕ್ರಿಪ್ಟೋ ಕರೆನ್ಸಿ ವರ್ಗಾಯಿಸಿ ವಂಚನೆ ಮಾಡಿದ್ದ ಆರೋಪಿಯನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತನನ್ನು ಶುಭಾಂಗ ಜೈನ್ (26) ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯಲ್ಲಿ ಆರೋಪಿ ಶುಭಾಂಗ್ ಜೈನ್ ಕೆಲಸ ಮಾಡುತ್ತಿದ್ದ. ಕಂಪನಿಯ ಕ್ರಿಪ್ಟೋ ಕರೆನ್ಸಿ ಅಕ್ರಮವಾಗಿ ವರ್ಗಾವಣೆ ಮಾಡಿದ್ದ. ಪಾಸ್ವರ್ಡ್ ಬದಲಿಸಿ ಕರೆನ್ಸಿಯನ್ನು ರೂಪಾಯಿಗೆ ಕನ್ವರ್ಟ್ ಮಾಡಿ ವಂಚನೆ ಎಸಗಿದ್ದ.
ಇಂಡಿಯನ್ ಕರೆನ್ಸಿಯಾಗಿ ಬದಲಿಸಿ ಸ್ನೇಹಿತರ ಖಾತೆಗೆ ವರ್ಗಾವಣೆ ಮಾಡಿದ್ದ. ಪ್ರಕರಣವನ್ನು ದಾಖಲಿಸಿಕೊಂಡಿದ್ದ ಸುಬ್ರಮಣ್ಯ ನಗರ ಠಾಣೆಯ ಪೊಲೀಸರು, ನಂತರ ವಂಚನೆ ಪ್ರಕರಣವನ್ನು ಸಿಐಡಿ ಗೆ ವರ್ಗಾವಣೆ ಮಾಡಿದ್ದರು. ಸದ್ಯ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. ಇದೆ ವೇಳೆ ಬಂಧಿತ ಆರೋಪಿಯಿಂದ ಎರಡು ಮೊಬೈಲ್, ಎರಡು ಲ್ಯಾಪ್ಟಾಪ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.