ಬೆಂಗಳೂರು : ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಇನ್ಸ್ಪೆಕ್ಟರ್ ಚಂದ್ರಾಧರ ನನ್ನು ಬಂಧಿಸಲಾಗಿದ್ದು, ಈ ಹಿಂದೆ ಬಿಟ್ ಕಾಯಿನ್ ಪ್ರಕರಣದ ತನಿಖೆಯನ್ನು ನಡೆಸಿದ್ದರು ಎನ್ನಲಾಗಿದೆ.ಈ ಹಿಂದೆ ಸೈಬರ್ ಕ್ರೈಂ ಠಾಣೆ ಇನ್ಸ್ಪೆಕ್ಟರ್ ಆಗಿದ್ದು ಹಗರಣದ ತನಿಖೆ ನಡೆಸಿದ್ದರು. ಇದೀಗ ಸಿಐಡಿ ಪೊಲೀಸರು ಚಂದ್ರಾಧರನನ್ನು ಬಂಧಿಸಿದ್ದಾರೆ.
ಪ್ರಕರಣದ ಹಿನ್ನೆಲೆ?
2015ರಲ್ಲಿ ಕೆಂಪೇಗೌಡನಗರ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್ ಕೇಸ್‌ನಲ್ಲಿ ಶ್ರೀಕಿಯನ್ನು ಬಂಧಿಸಲಾಗಿತ್ತು.ಈ ಕೇಸ್ ತನಿಖೆ ವೇಳೆ ಬಿಟ್‌ಕಾಯಿನ್ ಪ್ರಕರಣ ಬೆಳಕಿಗೆ ಬಂದಿತ್ತು.2020ರಲ್ಲಿ ಸುಮಾರು 1000 ಕೋಟಿ ಹಗರಣದ ಬಿಟ್‌ಕಾಯಿನ್ ಕೇಸ್‌ನಲ್ಲಿ ಶ್ರೀಕಿ ಬಂಧನವಾಗಿತ್ತು.
ಅಲ್ಲದೆ ಶ್ರೀಕಿ ಶ್ರೀಕಿ ಕಳೆದ ಐದಾರು ವರ್ಷಗಳಿಂದ ವಿವಿಧ ಕ್ರಿಪ್ಟೋ ಕರೆನ್ಸಿ ಮಾರಾಟ ಪ್ಲಾಟ್‌ಫಾರ್ಮ್‌ಗಳನ್ನು ಹ್ಯಾಕ್ ಮಾಡಿ ಅವುಗಳಿಂದ ಸಾವಿರಾರು ಬಿಟ್‌ಕಾಯಿನ್‌ಗಳನ್ನು ಎಗರಿಸಿದ್ದನು. ಅಲ್ಲದೇ ರಾಜ್ಯ ಸರ್ಕಾರದ ಇ-ಸಂಗ್ರಹಣಾ ಪೋರ್ಟಲ್ ಜಾಲತಾಣ ಹ್ಯಾಕ್ ಮಾಡಿದ್ದನು.
ಬಿಟ್ ಕಾಯಿನ್ ಹಗರಣ ಪ್ರಕರಣದ ಆರೋಪಿ ಶ್ರೀಕಿ ಅಲಿಯಾಸ್ ಶ್ರೀಕೃಷ್ಣನನ್ನು ಮೇ 7 ರಂದು ಪೊಲೀಸರು ಕೊನೆಗೂ ಬಂಧಿಸಿದ್ದರು . 2017ರಲ್ಲಿ ತುಮಕೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಯುನೋ ಕಾಯಿನ್ ಕಳವು ಪ್ರಕರಣದಲ್ಲಿ ಶ್ರೀಕಿಯನ್ನು ಸಿಐಡಿ ವಿಶೇಷ ತನಿಖಾ ಅಧಿಕಾರಿಗಳು ಬಂಧಿಸಿದ್ದಾರೆ. ಪ್ರಕರಣ ಎಸ್ಐಟಿಗೆ ವರ್ಗಾವಣೆ ಆಗಿತ್ತು.








