ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂಪಾಯಿ ಅಕ್ರಮಣ ವರ್ಗಾವಣೆ ಆಗಿದೆ ಎಂದು ಡೆತ್ ನೋಟ್ ಬರೆದಿಟ್ಟು ನಿಗಮದ ಅಧಿಕ ಚಂದ್ರಶೇಖರನ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿ ಅಧಿಕಾರಿಗಳು ಶಿವಮೊಗ್ಗ ನ್ಯಾಯಾಲಯಕ್ಕೆ ಸುಮಾರು 300 ಪುಟಗಳಷ್ಟು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕ್ಷಕ ಚಂದ್ರಶೇಖರ್ ಅವರು ಅವ್ಯವಹಾರದ ಕುರಿತು ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಇದೀಗ ಆತ್ಮಹತ್ಯೆ ಕುರಿತು ಚಂದ್ರಶೇಖರನ್ ಗೆ ಅಧಿಕಾರಿಗಳದ ಪದ್ಮನಾಭ ಮತ್ತು ಪರಶುರಾಮ್ ಅವರಿಂದ ಒತ್ತಡ ಇತ್ತು ಎಂದು ಚಾರ್ಜ್ ಶೀಟ್ ನಲ್ಲಿ ಉಲ್ಲೇಖ ಮಾಡಲಾಗಿದೆ.
ಪದ್ಮನಾಭ ಹಾಗೂ ಪರಶುರಾಮ್ ಒತ್ತಡದಿಂದ ಒತ್ತಡದಿಂದ ಮನನೊಂದು ಚಂದ್ರಶೇಖರನ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೋರ್ಟ್ ಗೆ ಸಲ್ಲಿಸಿದ್ದ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 300 ಪುಟಗಳ ಚಾರ್ಜ್ ಶೀಟ್ ಅನ್ನು ಅಧಿಕಾರಿಗಳು ಶಿವಮೊಗ್ಗ ಕೋರ್ಟಿಗೆ ಸಲ್ಲಿಸಿದ್ದಾರೆ. ಇನ್ನು ಈ ಪ್ರಕರಣದ ಕುರಿತಂತೆ ಶಾಸಕ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.