ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಎಂಎಲ್ ಸಿ ಸಿ.ಟಿ. ರವಿಗೆ ಸಿಐಡಿ ನೋಟಿಸ್ ನೀಡಿದೆ.
ಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆಗೆ ಹಾಜರಾಗುಂತೆ ಸಿ.ಟಿ. ರವಿಗೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಡಿ.19ರಂದು ವಿಧಾನಪರಿಷತ್ ಕಲಾಪದ ಸಂದರ್ಭದಲ್ಲಿ ಎಂಎಲ್ ಸಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಂಬಂಧ ಸಿ.ಟಿ.ರವಿ ಬಂಧನವಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ.