ಬೆಂಗಳೂರು : ಕಳೆದ ಡಿಸೆಂಬರ್ 19 ರಂದು ಬೆಳಗಾವಿಯ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್ಸಿ ಸಿಟಿ ರವಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಇದೀಗ ದೂರು ನೀಡಿದಂತ ಮೂವರು ಎಂಎಲ್‌ಸಿಗಳಿಗೂ ಕೂಡ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.
ಹೌದು ಸುವರ್ಣ ಸೌಧದಲ್ಲಿ ಎಂಎಲ್ಸಿ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿರುವ ಆರೋಪದ ಹಿನ್ನೆಲೆಯಲ್ಲಿ ದೂರುದಾರರಿಗೂ ಕೂಡ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ಎಸ್ ವಿ ಸಂಕನೂರು, ಡಿ ಎಸ್ ಅರುಣ್ ಹಾಗೂ ಕಿಶೋರ್ ಕುಮಾರ್ ಪುತ್ತೂರು ಅವರಿಗೂ ಕೂಡ ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ. ಇಂದು ಸಂಜೆ 4:30ಕ್ಕೆ ವಿಚಾರಣೆಗೆ ಹಾಜರಾಗುವ ಸೂಚನೆ ನೀಡಿದ್ದು, ಮೂವರು ಎಂಎಲ್ಸಿ ಗಳು ಸಹ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಲಿದ್ದಾರೆ ಎನ್ನಲಾಗಿದೆ.