ಉತ್ತರಕನ್ನಡ : ಕರ್ತವ್ಯ ನಿರತದಲ್ಲಿದ್ದ ಕೈಗಾ ಅಣುಸ್ಥಾವರದ ರಕ್ಷಣಾ ಸಿಬ್ಬಂದಿ ಗುಂಡು ಹಾರಿಸಿಕೊಂಡು ‘CISF’ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಕೈಗಾ ಅಣುಸ್ಥಾವರದಲ್ಲಿ ಈ ಒಂದು ದುರಂತ ಸಂಭವಿಸಿದೆ.
ಪಿಸ್ತೂಲಿಂದ ಗುಂಡು ಹಾರಿಸಿಕೊಂಡು ಬಿಹಾರ್ ಮೂಲದ ಅರವಿಂದ್ ಎನ್ನುವ ಸಿಬ್ಬಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕರ್ತವ್ಯದಲ್ಲಿದ್ದ ರಕ್ಷಣಾ ಸಿಬ್ಬಂದಿ ಆತ್ಮಹತ್ಯೆಯಿಂದ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಇದೀಗ ಆತಂಕ ಸೃಷ್ಟಿಯಾಗಿದೆ. ಮಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.