ಬೆಂಗಳೂರು : ವಿಧಾನ ಪರಿಷತ್ ನಲ್ಲಿ ಬಹುಮತ ಬರಲಿ ಅಂತ ಕಾಯ್ತಾ ಇದ್ದೇನೆ. ಬಿಜೆಪಿಯವರ ತಿದ್ದುಪಡಿಯನ್ನು ಬದಲಾವಣೆ ಮಾಡುತ್ತೇನೆ. ವಿಧಾನ ಪರಿಷತ್ ನಲ್ಲಿ ಬಹುಮತ ಸಿಕ್ಕಾಗ ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಾಡುತ್ತೇನೆ ಪರಿಷತ್ ನಲ್ಲಿ ಕಾಂಗ್ರೆಸ್ಗೆ ಸಿಕ್ಕಾಗ ತಿದ್ದುಪಡಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಕೆಪಿಸಿಸಿ ಕಚೇರಿಯಲ್ಲಿ ಸದ್ಭಾವನಾ ದಿನಾಚರಣೆ ಹಾಗೂ ಡಿ. ದೇವರಾಜ ಅರಸು ಜಯಂತಿ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಾವನೂರು ಆಯೋಗಕ್ಕೆ ಭಾರಿ ವಿರೋಧವಿದ್ದರು ಜಾರಿಗೆ ತಂದರೂ. ಹಾವನೂರು ಆಯೋಗವನ್ನು ದೇವರಾಜ್ ಅರಸು ಜಾರಿಗೆ ತಂದರು ಎಂದು ಅರಸು ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹೇಳಿಕೆ ನೀಡಿದರು. ಉಳುವವನೇ ಭೂಮಿಯ ಒಡೆಯ ಅಂತ ದೇವರಾಜ ಅರಸು ಮಾಡಿದ್ದರು. ಸೆಕ್ಷನ್ 17 ಎ.ಬಿ ತಿದ್ದುಪಡಿ ಮಾಡಿ ಜಮೀನು ಖರೀದಿಸುವಂತೆ ಮಾಡಿದರು.
ದೇವರಾಜ ಅರಸು ಅವರು 1972 ರಿಂದ ದೀರ್ಘಕಾಲ ರಾಜ್ಯದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದರು. ಅರಸು ಅವರನ್ನು ಸಾಮಾಜಿಕ ನ್ಯಾಯದ ಹರಿಕಾರ ಎಂದು ಕರೆಯುತ್ತೇವೆ. ಹಾವನೂರ ಆಯೋಗ ರಚನೆ ಮಾಡಿ ಹಿಂದುಳಿದವರಿಗೆ ಶಿಕ್ಷಣ, ಉದ್ಯೋಗದಲ್ಲಿ ಮೀಸಲಾತಿ ಒದಗಿಸಿದರು. ಸಮಾಜದಲ್ಲಿ ನಿರ್ಲಕ್ಷ್ಯಕ್ಕೆ ಒಳಗಾದವರನ್ನು ರಾಜಕೀಯವಾಗಿ ಗುರುತಿಸಿ, ಅವರಿಗೆ ಚುನಾವಣೆಯಲ್ಲಿ ನಿಲ್ಲಲು ಅವಕಾಶ ಕೊಟ್ಟರು. ವಿಧಾನಸೌಧದ ಮೆಟ್ಟಿಲು ಹತ್ತಲು ಸಾಧ್ಯವೇ ಇಲ್ಲ ಎಂದುಕೊಂಡವರೂ ವಿಧಾನಸೌಧ ಪ್ರವೇಶಿಸುವಂತೆ ಮಾಡಿದರು.
ಅರಸು ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದಾಗ, ಜಾಫರ್ ಷರೀಫ್ ಅವರಿಗೆ ಟಿಕೆಟ್ ಕೊಟ್ಟರು. ನಾಗರತ್ನಮ್ಮ ಅವರು ಜಟಕಾ ಗಾಡಿ ಓಡಿಸುವವರಿಗೆ ಟಿಕೆಟ್ ಕೊಡ್ತೀಯಲ್ಲ ಎಂದು ಕೇಳಿದರು. ನೋಡಮ್ಮಾ, ಇನ್ನು ಮೇಲೆ ಜಟಕಾ ಸಾಹೇಬರಿಗೆ, ಕ್ಷೌರ ಮಾಡುವವರಿಗೆ ಟಿಕೆಟ್ ಕೊಡೋದು, ಶೋಕಿ ಮಾಡುವವರಿಗಲ್ಲ ಎಂದು ಅರಸುರವರು ಉತ್ತರಿಸಿದ್ದರಂತೆ