ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಮತ್ತು 10 ಲಕ್ಷ ದಂಡ ವಿಧಿಸಿ ಶಿಕ್ಷೆ ಪ್ರಕಟಿಸಿತು ಇದೀಗ ಈ ಒಂದು ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ತನಿಖೆ ನಡೆಸಿದ ಎಸ್ಐಟಿ ತಂಡಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಎಸ್ಐಟಿ ತಂಡಕ್ಕೆ ಸಿಎಂ ಪದಕ ನೀಡಲಾಗುತ್ತದೆ ಎಂದು ಘೋಷಿಸಿದರು.
ಬೆಂಗಳೂರಲ್ಲಿ ಮಾತನಾಡಿದ ಅವರು, ಅತ್ಯಾಚಾರ ಕೇಸ್ ನಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಿತಾವಧಿ ಶಿಕ್ಷೆ ನೀಡಿರುವ ವಿಚಾರವಾಗಿ ಪೊಲೀಸರು ಮೊದಲಿನಿಂದಲೂ ಅಚ್ಚುಕಟ್ಟಾಗಿ ತನಿಖೆ ಮಾಡಿದ್ದಾರೆ. ಮೊದಲು ಎಸ್ಐಟಿಗೆ ಅಭಿನಂದನೆ ಹೇಳುತ್ತೇನೆ. ಇದು ಐತಿಹಾಸಿಕ ತೀರ್ಪು ನ್ಯಾಯಾಲಯಕ್ಕೆ ನಮ್ಮ ಎಸ್ಐಟಿಗೆ ಎಲ್ಲ ದಾಖಲೆಯನ್ನು ಕೊಟ್ಟಿತ್ತು. ಪೊಲೀಸರು ಬೇಗ ತನಿಖೆ ಬೇಗ್ ಮುಗಿಸಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ಪ್ರಜ್ವಲ್ ರೇವಣ್ಣ ಈ ಒಂದು ಕೇಸನ್ನು ರಾಜಕೀಯ ದೃಷ್ಟಿಯಿಂದ ನೋಡಬಾರದು ಪೊಲೀಸರ ಶ್ರಮಕ್ಕೆ ಸರ್ಕಾರ ಪ್ರಶಂಸೆ ವ್ಯಕ್ತಪಡಿಸುತ್ತದೆ. ತನಿಖೆ ನಡೆಸಿದ ವಿಶೇಷ ತನಿಖಾ ತಂಡಕ್ಕೆ ಸಿಎಂ ಪದಕ ನೀಡುತ್ತೇವೆ. ಅಲ್ಲದೇ ರಾಷ್ಟ್ರಪತಿ ಪದಕಕ್ಕೂ ಶಿಫಾರಸು ಮಾಡುತ್ತೇವೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.
ಇನ್ನು ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿಮಗೆಷ್ಟು ಗೊತ್ತಿದೆಯೋ ನಮಗೂ ಅಷ್ಟೇ ಗೊತ್ತಿದೆ. ತನಿಖಾ ಹಂತದಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ. ಇನ್ನು ನಿಗಮ ಮಂಡಳಿಗೆ ಅಧ್ಯಕ್ಷರನ್ನು ನೇಮಕ ಮಾಡುವ ವಿಚಾರವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಬೆಂಗಳೂರಿಗೆ ಬರುತ್ತಿದ್ದಾರೆ.ಅವರ ಹಂತದಲ್ಲಿ ಚರ್ಚೆ ಮಾಡಿ ಪಟ್ಟಿ ಫೈನಲ್ ಆಗಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದರು.