ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ರೈತರಿಗೆ ನೀಡಿದ್ದ ವಕ್ಫ್ ಬೋರ್ಡ್ ನೋಟಿಸ್ ಹಿಂಪಡೆಯಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್ ಬೋರ್ಡ್ ನಿಂದ ರೈತರಿಗೆ ನೀಡಲಾಗಿರುವ ನೋಟಿಸ್ ಹಿಂಪಡೆಯುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ರೈತರಿಗೆ ಕೊಟ್ಟಿರುವ ನೋಟಿಸ್ ಹಿಂಪಡೆಯಲಾಗುವುದು. ವಿವಾದ ಇಲ್ಲಿಗೆ ಮುಗಿದಿದೆ. ಮುಂದೆ ಯಾವ ರೀತಿ ಬೆಳವಣಿಗೆ ಆಗುತ್ತೆ ಗೊತ್ತಿಲ. ಅಂತಿಮವಾಗಿ ಕಂದಾಯ ದಾಖಲಾತಿ ಮುಖ್ಯ. ಅದರಲ್ಲಿ ಏನಿದೆಯೋ ಅದರಂತೆ ಆಗುತ್ತೆ. ವಕ್ಫ್ ದಾಖಲಾತಿಯಲ್ಲೊಂದೇ ಇದ್ದರೆ ಯಾವುದೇ ಸಮಸ್ಯೆ ಆಗಲ್ಲ ಎಂದರು.
ಇನ್ನು ರೈತರಿಗೆ ನೀಡಲಾಗಿರುವ ನೋಟಿಸ್ ವಾಪಾಸ್ ಪಡೆಯಲಾಗುವುದು. ಕಂದಾಯ ದಾಖಲೆಗಳನ್ನು ಆಧಾರವಾಗಿಟ್ಟುಕೊಂಡು ಭೂ ವಿವಾದ ಬಗೆಹರಿಸಲಾಗುವುದು ಎಂದು ತಿಳಿಸಿದ್ದಾರೆ.