ಮಂಡ್ಯ: ಜಿಲ್ಲೆಯ ಮದ್ದೂರಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ನಿಗದಿಯಂತೆ ಸಾರ್ವಜನಿಕರ ದರ್ಶನದ ಬಳಿಕ ಹುಟ್ಟೂರಲ್ಲಿ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದ್ದು, ಸಿಎಂ ಸಿದ್ದರಾಮಯ್ಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದಾರೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿಗೆ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರ ತಲುಪಿದೆ. ಒಕ್ಕಲಿಗ ಸಂಪ್ರದಾಯದಂತೆ ಮಧ್ಯಾಹ್ನ 3 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲು ಕುಟುಂಬಸ್ಥರು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇದಕ್ಕೂ ಮುನ್ನ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸೋಮನಹಳ್ಳಿಯ ಗ್ರಾಮಸ್ಥರು ಅಂತಿಮ ದರ್ಶನವನ್ನು ಪಡೆಯುತ್ತಿದ್ದಾರೆ. ಈ ವೇಳೆ ವಾಹನದಿಂದ ಪಾರ್ಥಿವ ಶರೀರ ಕೆಳಗಿಳಿಸುವಾಗ ಡಿ.ಕೆ.ಶಿವಕುಮಾರ್ ಹಾಗೂ ಡಿ.ಕೆ.ಸುರೇಶ್ ಹೆಗಲು ಕೊಟ್ಟಿದ್ದಾರೆ.
ಅಜಾತಶತ್ರುವಿನ ಅಂತಿಮಯಾತ್ರೆ!
ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಎಸ್.ಎಂ. ಕೃಷ್ಣ ಅವರ ಪಾರ್ಥಿವ ಶರೀರ ಹೊತ್ತ ವಾಹನವು ಮದ್ದೂರಿಗೆ ತೆರಳುವ ವೇಳೆ ಚನ್ನಪಟ್ಟಣದಲ್ಲಿ ಅಪಾರ ಸಂಖ್ಯೆಯ ಜನರು ಅವರ ಅಂತಿಮ ದರ್ಶನ ಪಡೆದರು. pic.twitter.com/qffK5qrpuu
— DK Shivakumar (@DKShivakumar) December 11, 2024
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ಗಣ್ಣರು ಎಸ್.ಎಂ.ಕೃಷ್ಣ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದಿದ್ದಾರೆ.