ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಗಾವಿ ಜಿಲ್ಲೆಯ ಬೈಲಾಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾಗಿರುವ ರಾಯಣ್ಣ ಶಾಲೆಯನ್ನು ಉದ್ಘಾಟಿಸಿ ಮಾತನಾಡಿ ರಾಯಣ್ಣ ಶಾಲೆಯಲ್ಲಿ ಕನ್ನಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶೇಕಡ 65 ರಷ್ಟು ಮೀಸಲಾತಿ ನೀಡಲಾಗುತ್ತದೆ ಎಂದು ಘೋಷಣೆ ಮಾಡಿದರು.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂಗೊಳ್ಳಿ ರಾಯಣ್ಣ ಓರ್ವ ಯೋಧ.ಹಿಂದೆ ಸೈನಿಕ ಶಾಲೆ ನಿರ್ಮಿಸಲು 110 ಎಕರೆ ಜಮೀನು ನೀಡಿದ್ದೆ. ನಾನೇ ಶಂಕುಸ್ಥಾಪನೆ ಕೂಡ ಮಾಡಿದ್ದೆ. ಜಮೀನಿಗೆ ಹಣ ನಾನೇ ಕೊಟ್ಟಿದ್ದೆ ಎಂದು ತಿಳಿಸಿದರು.
ಈಗ ನಾನೇ ಉದ್ಘಾಟನೆ ಮಾಡಿದ್ದು ಸಂತೋಷದ ಸಂಗತಿಯಾಗಿದೆ. ರಾಯಣ್ಣ ಶಾಲೆಯಲ್ಲಿ ಕನ್ನಡ ಮಕ್ಕಳಿಗೆ ಮೀಸಲಾತಿ ನೀಡಲು ಸಿದ್ಧ.ರಾಯಣ್ಣ ಶಾಲೆಯಲ್ಲಿ ಶೇ.65 ರಷ್ಟು ಕನ್ನಡ ಮಕ್ಕಳಿಗೆ ಮೀಸಲು ನೀದ್ಲಾಗುತ್ತದೆ.ಗುಣಮಟ್ಟದ ಶಿಕ್ಷಣ ನೀಡಲು ಸೈನಿಕ ಶಾಲೆ ಸ್ಥಾಪನೆ ಮಾಡಿದ್ದೇವೆ ಎಂದು ಸಂಗೊಳ್ಳಿ ಗ್ರಾಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಎಂಪಿ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಿಸಿದರೆ ಪೂರ್ಣಾವಧಿಯಲ್ಲಿ ಸಿದ್ದರಾಮಯ್ಯ ಸಿಎಂ ಆಗಲಿದ್ದಾರೆ ಎಂಬ ಪುತ್ರ ಯತೀಂದ್ರ ಹೇಳಿಕೆಗೆ ಇದೀಗ ಬೆಳಗಾವಿ ಜಿಲ್ಲೆಯ ಬೆಳವಂಗ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಮುಖ್ಯಮಂತ್ರಿ ಸ್ಥಾನದ ಕುರಿತು ಹೈಕಮಾಂಡ್ ನಿರ್ಧರಿಸುತ್ತದೆ ಎಂದು ತಿಳಿಸಿದರು.
ಯತೀಂದ್ರ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ಸಿಎಂ ಬಗ್ಗೆ ನಾವು ತೀರ್ಮಾನ ಮಾಡಲ್ಲ ಅವರು ತೀರ್ಮಾನಿಸಲ್ಲ. ಮುಖ್ಯಮಂತ್ರಿ ಸ್ಥಾನದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ತಿಳಿಸಿದರು.