ಬೆಂಗಳೂರು : ರಾಜ್ಯದಲ್ಲಿ ಎರಡು ಪ್ರತ್ಯೇಕ ಅಪಘಾತದಲ್ಲಿ 14 ಮಂದಿ ಸಾವನ್ನಪ್ಪಿದ್ದು, ಈ ಘಟನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು.
ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು.ಮೃತರ… pic.twitter.com/I9lrtfojK0
— CM of Karnataka (@CMofKarnataka) January 22, 2025