Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ಹಣ್ಣಿನ ಮೇಲಿರುವ `ಸ್ಟಿಕ್ಕರ್’ ತೆಗೆಯದೇ ತಿನ್ನುತ್ತಿದ್ದೀರಾ? ಆರೋಗ್ಯಕ್ಕೆ ಕಾದಿದೆ ಅಪಾಯ: FSSAI ನೀಡಿದೆ ತುರ್ತು ಎಚ್ಚರಿಕೆ!

06/04/2026 9:22 AM

ಯಾವಾಗ ಅಂದ್ರೆ ಆವಾಗ ನಿದ್ದೆ ಮಾಡ್ತೀರಾ? ಎಚ್ಚರ! ಹಾರ್ಟ್ ಅಟ್ಯಾಕ್ ಮತ್ತು ಸ್ಟ್ರೋಕ್ ಅಪಾಯದ ಬಗ್ಗೆ ಸಂಶೋಧಕರ ವಾರ್ನಿಂಗ್

06/04/2026 9:21 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸಾಲ ಸೌಲಭ್ಯಗಳು.!

06/04/2026 9:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ಜಿ ರಾಮ್‌ ಜಿ’ ಹಿಂಪಡೆದು `ಮನರೇಗಾ ಕಾಯ್ದೆ’ ಮರುಸ್ಥಾಪಿಸುವವರೆಗೆ ಹೋರಾಟ: CM ಸಿದ್ದರಾಮಯ್ಯ ಘೋಷಣೆ
KARNATAKA

BREAKING : `ಜಿ ರಾಮ್‌ ಜಿ’ ಹಿಂಪಡೆದು `ಮನರೇಗಾ ಕಾಯ್ದೆ’ ಮರುಸ್ಥಾಪಿಸುವವರೆಗೆ ಹೋರಾಟ: CM ಸಿದ್ದರಾಮಯ್ಯ ಘೋಷಣೆ

By kannadanewsnow5703/01/2026 1:33 PM

ಬೆಂಗಳೂರು: ಗ್ರಾಮೀಣ ಭಾರತಕ್ಕಿದ್ದ ಉದ್ಯೋಗದ ಖಾತರಿಯನ್ನೇ ಕಸಿಯುತ್ತಿರುವ ಬಡಜನರ ವಿರೋಧಿ, ಅಧಿಕಾರ ವಿಕೇಂದ್ರೀಕರಣ ತತ್ವದ ವಿರೋಧಿ “ವಿಬಿ ಗ್ರಾಮ್ ಜಿ” ಕಾಯ್ದೆಯನ್ನು ಸಂಪೂರ್ಣ ರದ್ದುಗೊಳಿಸಿ, ಜನರ ಕನಿಷ್ಠ ಕೂಲಿಯ ಹಕ್ಕನ್ನು ಮರುಸ್ಥಾಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮನರೇಗಾ ಮತ್ತೆ ಜಾರಿಗೆ ತರುವ ಮೂಲಕ ಬಡವರ, ದಲಿತರ, ಮಹಿಳೆಯರ ಹಾಗೂ ಸಣ್ಣ ರೈತರ ಉದ್ಯೋಗದ ಹಕ್ಕು ಪುನರ್‌ ಸ್ಥಾಪಿಸಬೇಕು. ಅಷ್ಟೇ ಅಲ್ಲ, ಪಂಚಾಯಿತಿಗಳ ಸ್ವಯಂ ಆಡಳಿತ ಹಕ್ಕು ಮರುಸ್ಥಾಪಿಸಬೇಕು.ಈ ವಿಚಾರದಲ್ಲಿ ಪ್ರಧಾನಿ ಮಧ್ಯಪ್ರವೇಶಿಸಬೇಕು. ಹೊಸ ಕಾಯ್ದೆಯನ್ನು ಅಮಾನತಿನಲ್ಲಿ ಇಟ್ಟು, ರಾಜ್ಯ ಸರ್ಕಾರದ ಜೊತೆ ಸಮಾಲೋಚನೆ ನಡೆಸಬೇಕು ಎಂದು ಪ್ರಧಾನಿಗೆ ನಾನು ಈಗಾಗಲೇ ಪತ್ರ ಬರೆದಿದ್ದೇನೆ ಎಂದು ಹೇಳಿದ್ದಾರೆ.

ಗಾಂಧೀಜಿಯವರ ಗ್ರಾಮ ಸ್ವರಾಜ್‌ ಕನಸು ನನಸು ಮಾಡುವ ಯೋಜನೆ ಅದಾಗಿತ್ತು. ಗಾಂಧೀಜಿಯವರನ್ನು ಗೋಡ್ಸೆ ಕೊಂದರು. ಹೊಸ ಯೋಜನೆಯ ಮೂಲಕ ಈಗ ಎರಡನೇ ಬಾರಿಗೆ ಗಾಂಧೀಜಿಯವರನ್ನು ಬಿಜೆಪಿಯವರು ಕೊಂದು ಹಾಕುತ್ತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಸುದ್ದಿಗೋಷ್ಠಿಯ ಮುಖ್ಯಾಂಶಗಳು ಹೀಗಿವೆ

ಮನುಸ್ಮೃತಿಯಿಂದ ಪ್ರೇರಣೆ ಪಡೆದಿರುವ ಆರ್.ಎಸ್.ಎಸ್ ಬಿಜೆಪಿ ಸರ್ಕಾರಕ್ಕೆ ಮಾರ್ಗದರ್ಶಕವಾಗಿದೆ. ಮಹಾತ್ಮ ಗಾಂಧಿಯನ್ನು ಗೋಡ್ಸೆ ಮೊದಲ ಬಾರಿ ಕೊಂದು ಹಾಕಿದರೆ, ಇದೀಗ ನರೇಗಾ ಕಾಯ್ದೆಯಲ್ಲಿ ಇದ್ದ ಮಹಾತ್ಮ ಗಾಂಧಿ ಹೆಸರನ್ನು ತೆಗೆದು ಹಾಕುವ ಮೂಲಕ ಬಿಜೆಪಿ ಅವರನ್ನು ಮತ್ತೆ ಮತ್ತೆ ಕೊಲ್ಲುವ ಕೆಲಸ ಮಾಡುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ಹಿಂಪಡೆಯುವ ಮೂಲಕ ವಿಬಿ ಜಿ ರಾಮ್ ಜಿ ಹೆಸರಿನಲ್ಲಿ ಹೊಸ ಕಾಯ್ದೆ ಜಾರಿಗೆ ತರುವಾಗ, ರಾಜ್ಯ ಸರ್ಕಾರಗಳ ಅಭಿಪ್ರಾಯ ಕೇಳಿಲ್ಲ. ಭಾರತೀಯರ ಅಭಿಪ್ರಾಯ ಪಡೆಯದೆ ನೇರವಾಗಿ ಹೊಸ ಕಾಯ್ದೆ ಜಾರಿಗೊಳಿಸುವ ಮೂಲಕ ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸಿದೆ.

ಮನಮೋಹನ ಸಿಂಗ್ ಅವರ ನೇತೃತ್ವದ ಯುಪಿಎ ಸರ್ಕಾರ ಉದ್ಯೋಗದ ಹಕ್ಕು, ಮಾಹಿತಿ ಹಕ್ಕು, ಶೈಕ್ಷಣಿಕ ಹಕ್ಕು ಮೊದಲಾದ ಕ್ರಾಂತಿಕಾರಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಜನರಿಗೆ ಹೆಚ್ಚಿನ ಅಧಿಕಾರವನ್ನು ನೀಡುವ ಕಾರ್ಯವನ್ನು ಮಾಡಿತ್ತು.

ಮೋದಿ ಸರ್ಕಾರ ಡಿಸೆಂಬರ್ 17ರಂದು ಕಾಯ್ದೆಯನ್ನು ಸಂಸತ್ತಿನಲ್ಲಿ ಮಂಡಿಸಿ ಡಿ.18ರಂದು ಅಂಗೀಕಾರ ಪಡೆದಿದೆ. ಸುಮಾರು 12.16 ಕೋಟಿ ನರೇಗಾ ಕಾರ್ಮಿಕರು ದೇಶದಲ್ಲಿದ್ದಾರೆ. ಅದರಲ್ಲಿ 6.21ಕೋಟಿ ಮಹಿಳೆಯರು ಇದ್ದಾರೆ. ಪ.ಜಾತಿಯವರು ಶೇ.17, ಪ.ವರ್ಗ ಶೇ. 11 ಇದ್ದಾರೆ.
ನಮ್ಮ ರಾಜ್ಯದಲ್ಲಿ 71.18 ಲಕ್ಷ ನರೇಗಾ ಕಾರ್ಮಿಕರಿದ್ದಾರೆ. ಇದರಲ್ಲಿ 36.75 ಲಕ್ಷ ಮಹಿಳೆಯರು, ಅಂದರೆ ಶೇ. 51.6 ಮಹಿಳೆಯರಿದ್ದಾರೆ.

ಮನಮೋಹನ್ ಸಿಂಗ್ ಅವರ ಜನಪರ ಕಾಯ್ದೆಯನ್ನು ಹಿಂಪಡೆದುಕೊಳ್ಳುವ ಮೂಲಕ ಕಾರ್ಪೊರೇಟ್ ಕಂಪೆನಿಗಳಿಗೆ ಲಾಭ ಮಾಡಿಕೊಡುವ ಕೆಲಸವನ್ನು ಮೋದಿ ಸರ್ಕಾರ ಮಾಡುತ್ತಿದೆ.

ನರೇಗಾ ಕಾಯ್ದೆ ಪ್ರಕಾರ ಜನಸಾಮಾನ್ಯರು, ಕೂಲಿ ಕಾರ್ಮಿಕರು, ಕೃಷಿ ಕಾರ್ಯಗಳ ಜೊತೆಯಲ್ಲಿ ತಾವಿದ್ದ ಸ್ಥಳದಲ್ಲೇ ನರೇಗಾ ಅಡಿ ಕೂಲಿ ಕೆಲಸ ಮಾಡಲು ಅವಕಾಶವಿತ್ತು. ಆ ಮೂಲಕ ಹಳ್ಳಿಗಾಡಿನ ಆರ್ಥಿಕತೆ ಕಟ್ಟಲು ಸಾಧ್ಯವಾಗಿತ್ತು. ಸ್ಥಳೀಯವಾಗಿ ಆಸ್ತಿ ಸೃಜನೆಯಾಗುತ್ತಿತ್ತು. ಉದ್ಯೋಗ ಕೇಳಿ ಪಡೆಯುವ ಹಕ್ಕು ಜನರಿಗಿತ್ತು. ಈಗ ಇದ್ಯಾವುದೂ ಇಲ್ಲವಾಗಿದೆ.

ಕಳೆದ 11 ವರ್ಷಗಳ ಕೇಂದ್ರ ಸರ್ಕಾರದ ಸಾಧನೆ ಅಂದರೆ ಯೋಜನೆಗಳ ಹೆಸರು ಬದಲಾಯಿಸಿರುವುದು ಮಾತ್ರ. ಹಿಂದೆ ಜಾರಿಯಲ್ಲಿದ್ದ ಸುಮಾರು 30 ಯೋಜನೆಗಳ ಹೆಸರು ಬದಲಾವಣೆ ಅಥವಾ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವ ಕಾರ್ಯವನ್ನು ಮೋದಿ ಸರ್ಕಾರ ಮಾಡಿದೆ.

ಪ್ರಸ್ತುತ ಕಾಯ್ದೆಯಡಿ 100 ದಿನ ಕನಿಷ್ಟ ಕೆಲಸ ನೀಡಬೇಕಾಗಿತ್ತು. ಅವರು ಎಲ್ಲಿ ವಾಸಿಸುತ್ತಾರೋ ಅಲ್ಲಿಯೇ ಕೆಲಸ ನೀಡಬೇಕಾಗಿತ್ತು. ಈಗ ಹೊಸ ಕಾಯ್ದೆ ಸೆಕ್ಷನ್ 5(1) ಪ್ರಕಾರ ಸರ್ಕಾರ ಅಧಿಸೂಚಿತ ಪ್ರದೇಶದಲ್ಲಿ ಮಾತ್ರ ಉದ್ಯೋಗ ನೀಡಲಾಗುತ್ತದೆ. ಉದ್ಯೋಗ ದೊರೆಯುವ ಬಗ್ಗೆ ಯಾವುದೇ ಗ್ರಾಮ ಪಂಚಾಯತ್ ಗಳಿಗೂ ಖಾತ್ರಿಯಿರುವುದಿಲ್ಲ.

ವರ್ಷದ ಎಲ್ಲಾ ಅವಧಿಯಲ್ಲಿ ಲಭ್ಯವಾಗುತ್ತಿದ್ದ ಕೂಲಿ ಕೆಲಸವನ್ನು ಈಗ ನಿರ್ಬಂಧಿಸಲಾಗಿದ್ದು, ಕೃಷಿ ಚಟುವಟಿಕೆ ಅವಧಿಯ 60 ದಿನ ಯೋಜನೆಯಡಿ ಯಾವುದೇ ಉದ್ಯೋಗ ನೀಡಲಾಗುವುದಿಲ್ಲ. ಹಣದುಬ್ಬರಕ್ಕೆ ತಕ್ಕಂತೆ ಕೂಲಿ ಹಣವನ್ನು ಸರಿದೂಗಿಸುವ ಅವಕಾಶವನ್ನು ತೆಗೆದು ಹಾಕಲಾಗಿದೆ.

ಹಿಂದಿನ ಕಾಯ್ದೆ ಪ್ರಕಾರ ಕೇಂದ್ರ ಸರ್ಕಾರ ಪೂರ್ಣ ಅನುದಾನವನ್ನು ಭರಿಸುತ್ತಿತ್ತು. ಹೊಸ ಕಾಯ್ದೆ ಪ್ರಕಾರ ಶೇ.60 ರಷ್ಟು ಕೇಂದ್ರ ಹಾಗೂ ಶೇ.40ರಷ್ಟು ರಾಜ್ಯ ಸರ್ಕಾರ ಭರಿಸಲಿದೆ. ಇದು ರಾಜ್ಯಗಳ ಮೇಲೆ ಹೆಚ್ಚಿನ ಹಣಕಾಸು ಹೊರೆಯನ್ನು ಹೇರಲಿದ್ದು, ಇದು ಸಂವಿಧಾನದ ಆರ್ಟಿಕಲ್ 258 ಮತ್ತು 280ಗೆ ವಿರುದ್ಧವಾಗಿದೆ.

ಗ್ರಾಮ ಪಂಚಾಯತ್ ಗಳಿಗೆ ಇದ್ದ ಅಧಿಕಾರವನ್ನು ಇದೀಗ ಕೇಂದ್ರ ಸರ್ಕಾರ ಕಿತ್ತು ಕೊಂಡಿದ್ದು, ಇದು ಒಕ್ಕೂಟ ವ್ಯವಸ್ಥೆಗೆ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿದೆ.
ಹೊಸ ಕಾಯ್ದೆಯನ್ನು ಜಾರಿಗೊಳಿಸದಿರುವಂತೆ ಕೋರಿ ಪ್ರಧಾನಿಯವರಿಗೆ ಡಿ.30ರಂದು ನಾನು ಪತ್ರ ಬರೆದಿದ್ದೇನೆ. ಹೊಸ ಕಾಯ್ದೆಯನ್ನು ರದ್ದುಪಡಿಸಬೇಕು. ನರೇಗಾ ಕಾಯ್ದೆ ಮತ್ತೆ ಜಾರಿಗೊಳಿಸಬೇಕು. ಮಹಿಳೆಯರು, ದಲಿತರ ಉದ್ಯೋಗದ ಹಕ್ಕನ್ನು ಪುನರ್ ಸ್ಥಾಪಿಸಬೇಕು. ಪಂಚಾಯತ್ಗಳ ಸ್ವಯಂ ಆಡಳಿತದ ಹಕ್ಕನ್ನು ಮರು ಸ್ಥಾಪಿಸಬೇಕು ಎಂದು ರಾಜ್ಯ ಸರ್ಕಾರ ಕೇಂದ್ರವನ್ನು ಒತ್ತಾಯಿಸಲಿದೆ.

ಹೊಸ ಬಿಲ್ ಮೂಲಕ ಗ್ರಾಮೀಣ ಜನರ ಜೀವನೋಪಾಯ ಕಸಿಯಲಾಗುತ್ತಿದೆ. ರಾಜ್ಯ ಸರ್ಕಾರದ ಜೊತೆ ಚರ್ಚೆ ಮಾಡದೆ, ರಾಜ್ಯಗಳ ಆಯವ್ಯಯದ ಮೇಲೆ ಹೆಚ್ಚಿನ ಹೊರೆಯನ್ನು ಸಂವಿಧಾನ ಬಾಹಿರವಾಗಿ ಹೇರಲಾಗುತ್ತಿದೆ.

ಹೊಸ ಕಾಯ್ದೆಯಿಂದ ನಿರುದ್ಯೋಗ ಹೆಚ್ಚಳ, ಉದ್ಯೋಗದಲ್ಲಿ ಮಹಿಳೆಯರ ಪಾಲುದಾರಿಕೆ ಇಳಿಕೆ, ದಲಿತ ಹಾಗೂ ಆದಿವಾಸಿ ಕುಟುಂಬಗಳ ಮೇಲೆ ಹೆಚ್ಚಿನ ಒತ್ತಡ ಸೃಷ್ಟಿ, ಗ್ರಾಮೀಣ ಜೀವನೋಪಾಯಗಳ ಕುಸಿತದಿಂದ ಗ್ರಾಮೀಣ ಬದುಕು ದುಸ್ತರಗೊಳ್ಳಲಿದೆ. ಪಂಚಾಯತ್ಗಳು ಕೇವಲ ಅನುಷ್ಠಾನ ಸಂಸ್ಥೆಗಳಾಗಿ ಕಾರ್ಯ ನಿರ್ವಹಿಸುವಂತಾಗುತ್ತದೆ. ಈ ಮೂಲಕ ಗುತ್ತಿಗೆದಾರರಿಗೆ ಹೆಚ್ಚಿನ ಅವಕಾಶ ಸೃಷ್ಟಿಸಲಾಗುತ್ತಿದೆ.

20 ವರ್ಷಗಳ ಹಿಂದೆ ಮನಮೋಹನ ಸಿಂಗ್ ಸರ್ಕಾರ ಕಾಯ್ದೆಯನ್ನು ಜಾರಿಗೊಳಿಸುವ ಸಂದರ್ಭದಲ್ಲೇ ಬಿಜೆಪಿ ಯೋಜನೆಯನ್ನು ವಿರೋಧಿಸಿತ್ತು. ಆಹಾರ ಭದ್ರತಾ ಕಾಯ್ದೆಯನ್ನು ಸಹ ಗೇಲಿ ಮಾಡಿತ್ತು. ಜನಪರವಾದ ಕಾನೂನುಗಳನ್ನು ನಾಶ ಮಾಡುವುದೇ ಬಿಜೆಪಿ ಕೆಲಸ.

ಗ್ರಾಮೀಣ ಭಾರತಕ್ಕಿದ್ದ ಉದ್ಯೋಗದ ಖಾತರಿಯನ್ನೇ ಕಸಿಯುತ್ತಿರುವ ಬಡಜನರ ವಿರೋಧಿ, ಅಧಿಕಾರ ವಿಕೇಂದ್ರೀಕರಣ ತತ್ವದ ವಿರೋಧಿ "ವಿಬಿ ಗ್ರಾಮ್ ಜಿ" ಕಾಯ್ದೆಯನ್ನು ಸಂಪೂರ್ಣ ರದ್ದುಗೊಳಿಸಿ, ಜನರ ಕನಿಷ್ಠ ಕೂಲಿಯ ಹಕ್ಕನ್ನು ಮರುಸ್ಥಾಪಿಸಬೇಕು ಎನ್ನುವುದು ನಮ್ಮ ಆಗ್ರಹ. #MGNREGA pic.twitter.com/9Ue1Ycr8cY

— Siddaramaiah (@siddaramaiah) January 3, 2026

BREAKING: CM Siddaramaiah announces fight until ``Ji Ram Ji'' is withdrawn and ``MNREGA Act'' is reinstated
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸಾಲ ಸೌಲಭ್ಯಗಳು.!

06/04/2026 9:18 AM2 Mins Read

ALERT : ಪುರುಷರೇ ಎಚ್ಚರ : ಸದ್ದಿಲ್ಲದೆ ನಿಮ್ಮನ್ನು ಕಾಡುವ ಈ 7 ಆರೋಗ್ಯ ಸಮಸ್ಯೆಗಳ ಬಗ್ಗೆ ಇರಲಿ ಜಾಗ್ರತೆ!

06/04/2026 9:16 AM2 Mins Read

GOOD NEWS : ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ಕ್ಕೆ ಅವಕಾಶ.!

06/04/2026 8:48 AM1 Min Read
Recent News

ALERT : ಹಣ್ಣಿನ ಮೇಲಿರುವ `ಸ್ಟಿಕ್ಕರ್’ ತೆಗೆಯದೇ ತಿನ್ನುತ್ತಿದ್ದೀರಾ? ಆರೋಗ್ಯಕ್ಕೆ ಕಾದಿದೆ ಅಪಾಯ: FSSAI ನೀಡಿದೆ ತುರ್ತು ಎಚ್ಚರಿಕೆ!

06/04/2026 9:22 AM

ಯಾವಾಗ ಅಂದ್ರೆ ಆವಾಗ ನಿದ್ದೆ ಮಾಡ್ತೀರಾ? ಎಚ್ಚರ! ಹಾರ್ಟ್ ಅಟ್ಯಾಕ್ ಮತ್ತು ಸ್ಟ್ರೋಕ್ ಅಪಾಯದ ಬಗ್ಗೆ ಸಂಶೋಧಕರ ವಾರ್ನಿಂಗ್

06/04/2026 9:21 AM

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸಾಲ ಸೌಲಭ್ಯಗಳು.!

06/04/2026 9:18 AM

ALERT : ಪುರುಷರೇ ಎಚ್ಚರ : ಸದ್ದಿಲ್ಲದೆ ನಿಮ್ಮನ್ನು ಕಾಡುವ ಈ 7 ಆರೋಗ್ಯ ಸಮಸ್ಯೆಗಳ ಬಗ್ಗೆ ಇರಲಿ ಜಾಗ್ರತೆ!

06/04/2026 9:16 AM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಸಿಗಲಿದೆ ಈ ಎಲ್ಲಾ ಸಾಲ ಸೌಲಭ್ಯಗಳು.!

By kannadanewsnow5706/04/2026 9:18 AM KARNATAKA 2 Mins Read

ಬೆಂಗಳೂರು: ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕ-ಯುವತಿಯರು ಮತ್ತು ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು ವಿವಿಧ…

ALERT : ಪುರುಷರೇ ಎಚ್ಚರ : ಸದ್ದಿಲ್ಲದೆ ನಿಮ್ಮನ್ನು ಕಾಡುವ ಈ 7 ಆರೋಗ್ಯ ಸಮಸ್ಯೆಗಳ ಬಗ್ಗೆ ಇರಲಿ ಜಾಗ್ರತೆ!

06/04/2026 9:16 AM

GOOD NEWS : ರಾಜ್ಯದಲ್ಲಿ ‘ದ್ವಿತೀಯ PUC’ವರೆಗೆ ಗಂಡು ಮಕ್ಕಳಿಗೂ ‘ಉಚಿತ ಬಸ್ ಪ್ರಯಾಣ’ಕ್ಕೆ ಅವಕಾಶ.!

06/04/2026 8:48 AM

BIG NEWS : ಏಪ್ರಿಲ್ 8 ಕ್ಕೆ `ಕರ್ನಾಟಕ ದ್ವಿತೀಯ PUC’ ಫಲಿತಾಂಶ ಪ್ರಕಟ |Karnataka PUC Result

06/04/2026 8:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.