ಬೆಂಗಳೂರು : ಒಳಮೀಸಲಾತಿ ಸಂಬಂಧ ರಚನೆಯಾಗಿರುವ ಆಯೋಗವು ತನ್ನ ವರದಿ ನೀಡಿದ ತಕ್ಷಣ ಒಳಮೀಸಲಾತಿ ಜಾರಿ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದ್ದಾರೆ.
ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಒಳ ಮೀಸಲಾತಿಯನ್ನು ವೈಜ್ಞಾನಿಕವಾಗಿ, ಜ್ಞಾನಿಕವಾಗಿ, ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಕ್ತ ಅಂಕಿ ಅಂಶಗಳ ಅಗತ್ಯವಿರುತ್ತದೆ. ಈ ಅಂಕಿ ಅಂಶಗಳನ್ನು ವೈಜ್ಞಾನಿಕವಾಗಿ ನಿರ್ಧರಿಸಲು ರಾಜ್ಯ ಸರ್ಕಾರವು ಆಯೋಗವನ್ನು ರಚನೆ ಮಾಡಲು ನಿರ್ಧರಿಸಿದೆ. ಆಯೋಗವು ನಿಗದಿತ ಗಡುವಿನೊಳಗೆ ವರದಿಯನ್ನು ಸಲ್ಲಿಸಲು ಬೇಕಾದ ಅಗತ್ಯ ಕ್ರಮಗಳನ್ನು ಸರ್ಕಾರವು ತೆಗೆದುಕೊಳ್ಳಲಿದೆ. ಆಯೋಗದ ವರದಿ ಬಂದ ತಕ್ಷಣ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಕ್ರಮವಹಿಸಲಾಗುವುದು ಎಂದರು.
ಸಮರ್ಪಕವಾಗಿ, ವೈಜ್ಞಾನಿಕವಾಗಿ ಹಾಗೂ ವಿವಾದಗಳಿಗೆ ಆಸ್ಪದ ನೀಡದಂತೆ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕೆಂಬ ಉದ್ದೇಶದಿಂದ ಸರ್ಕಾರ ಆಯೋಗ ಸರ್ಕಾರ ರಚಿಸಿದ್ದು, ಇದರಲ್ಲಿ ಯಾವುದೇ ವಿಳಂಬ ನೀತಿ ಅಥವಾ ಕಾಲಹರಣ ತಂತ್ರ ಇರುವುದಿಲ್ಲ. ಸಾಮಾಜಿಕ ನ್ಯಾಯದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದ್ದಾರೆ.
ಒಳಮೀಸಲಾತಿ ಸಂಬಂಧ ರಚನೆಯಾಗಿರುವ ಆಯೋಗವು ತನ್ನ ವರದಿ ನೀಡಿದ ತಕ್ಷಣ ಒಳಮೀಸಲಾತಿ ಜಾರಿ ಮಾಡುತ್ತೇವೆ. #ಒಳಮೀಸಲಾತಿ pic.twitter.com/WOv9JzeiGj
— Siddaramaiah (@siddaramaiah) October 31, 2024
ಸಮರ್ಪಕವಾಗಿ, ವೈಜ್ಞಾನಿಕವಾಗಿ ಹಾಗೂ ವಿವಾದಗಳಿಗೆ ಆಸ್ಪದ ನೀಡದಂತೆ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕೆಂಬ ಉದ್ದೇಶದಿಂದ ಸರ್ಕಾರ ಆಯೋಗ ಸರ್ಕಾರ ರಚಿಸಿದ್ದು, ಇದರಲ್ಲಿ ಯಾವುದೇ ವಿಳಂಬ ನೀತಿ ಅಥವಾ ಕಾಲಹರಣ ತಂತ್ರ ಇರುವುದಿಲ್ಲ.
ಸಾಮಾಜಿಕ ನ್ಯಾಯದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ… pic.twitter.com/HaPX2JaieG
— Siddaramaiah (@siddaramaiah) October 31, 2024