Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಉದ್ಯೋಗಕ್ಕಾಗಿ ‘ಆದಿದ್ವಾರ’ ಆಪ್’ ಬಿಡುಗಡೆ

vidhana soudha

BIG NEWS : ರಾಜ್ಯ ಶಿಕ್ಷಣ ನೀತಿ ಜಾರಿಗೆ ಸಂಪುಟ ಉಪಸಮಿತಿ ರಚನೆಗೆ ಸರ್ಕಾರ ನಿರ್ಧಾರ.!

BIG NEWS : 2026-27ನೇ ಸಾಲಿನ ರಾಜ್ಯ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ : ಮೇ.29 ರಿಂದ ಶಾಲೆಗಳು ಪುನರಾರಂಭ.!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : `ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ’ ತಪ್ಪಿಸಲು ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು : CM ಸಿದ್ದರಾಮಯ್ಯ ಘೋಷಣೆ.!
KARNATAKA

BREAKING : `ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳ ಕಿರುಕುಳ’ ತಪ್ಪಿಸಲು ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು : CM ಸಿದ್ದರಾಮಯ್ಯ ಘೋಷಣೆ.!

By kannadanewsnow57

ಬೆಂಗಳೂರು : ಮೈಕ್ರೋ ಫೈನಾನ್ಸ್ ಕಿರುಕುಳದ ಹೆಚ್ಚಳದ ಬೆನ್ನಲ್ಲೇ ಎಚ್ಚೆತ್ತಿರುವ ರಾಜ್ಯ ಸರ್ಕಾರವು ಇದೀಗ ಮೈಕ್ರೋ ಫೈನಾನ್ಸ್ ನಿಯಂತ್ರಣಕ್ಕೆ ಹೊಸ ಪ್ಲಾನ್ ಮಾಡಿದೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದ್ದು, ಸಂಜೆ 5 ಗಂಟೆ ಮೇಲೆ ಮೈಕ್ರೋ ಫೈನಾನ್ಸ್ ಸಿಬ್ಬಂದಿ ಸಾಲ ವಸೂಲಾತಿಗೆ ಹೋಗುವಂತಿಲ್ಲ ಎಂದು ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ನಿಮ್ಮ ಸಿಬ್ಬಂದಿ ನಿಯಮ ಬಾಹಿರವಾಗಿ ವಸೂಲಿ ಮಾಡಲಾಗುತ್ತಿದೆ. ಕಾನೂನು ಕೈಗೆತ್ತಿಕೊಳ್ಳಲು ನಿಮಗೆ ಅನುಮತಿ ಕೊಟ್ಟವರು ಯಾರು,? ಸಾಲ ವಸೂಲಿಗೆ ರೌಡಿಗಳನ್ನು ಇಟ್ಟುಕೊಂಡಿದ್ದೀರಾ? ಸಾಲ ತೀರಿಸಲು ಸಾಧ್ಯವೇ ಎಂಬುದನ್ನೂ ಗಮನಿಸದೇ ಒಬ್ಬನೇ ವ್ಯಕ್ತಿಗೆ ನಿಯಮ ಬಾಹಿರವಾಗಿ ಸಾಲ ನೀಡುವುದು ಸರಿಯಲ್ಲ. ಸಾಲಗಾರರ ಮನೆ ಜಪ್ತಿ ಮಾಡುವ ಮೊದಲು ನೀವು ನ್ಯಾಯಾಲಯದಿಂದ ಅನುಮತಿ ಪಡೆದಿದ್ದೀರಾ? ಕಾನೂನು ಕೈಗೆತ್ತಿಕೊಳ್ಳಲು ನಿಮ್ಮ ಸಿಬ್ಬಂದಿಗೆ ಅನುಮತಿ ಕೊಟ್ಟವರು ಯಾರು? ಸಾಲ ವಸೂಲಿಗೆ ರೌಡಿಗಳನ್ನು ಬಳಸುತ್ತಿದ್ದೀರಾ ? ರಿಸರ್ವ್ ಬ್ಯಾಂಕಿನ ಷರತ್ತು ಮತ್ತು ನಿಬಂಧನೆಗಳನ್ನು ಸಾಲಗಾರರಿಗೆ ಅವರ ಆಡು ಭಾಷೆಯಲ್ಲಿ ಅರ್ಥ ಮಾಡಿಸಿದ್ದೀರಾ? RBI ನಿಯಮ ಮೀರಿ ಸಾಲ ಕೊಡುತ್ತಿದ್ದೀರಾ ? ಮರುಪಾವತಿಯ ಕೆಪಾಸಿಟಿ ಗಮನಿಸದೆ ಒಬ್ಬರೇ ಸಾಲಗಾರರಿಗೆ ಪದೇ ಪದೇ ಸಾಲ ಕೊಡುತ್ತಿರುವುದು ಏಕೆ? ಎಂದು ಸಾಲು ಸಾಲು ಪ್ರಶ್ನೆ ಮುಂದಿಟ್ಟಿದ್ದಾರೆ.

ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಾಲ ಕೊಡಬೇಡಿ ಎಂದು ನಾವು ಯಾರಿಗೂ ಹೇಳಿಲ್ಲ. ಆದರೆ ವಸೂಲಿ ಮಾಡುವಾಗ ಕಿರುಕುಳ ಕೊಡಬಾರದು. ಆರ್ ಬಿಐ ನಿಯಮದ ಪ್ರಕಾರ ನಡೆದುಕೊಳ್ಳಬೇಕು. ಸಂಜೆ 5 ಗಂಟೆ ಬಳಿಕ ವಸೂಲಾತಿಗೆ ಹೋಗಬಾರದು ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಸಾಲ ವಸೂಲಾತಿಗೆ ಔಟ್ ಸೋರ್ಸ್, ರೌಡಿಶೀಟರ್ ಗಳನ್ನು, ಗುಂಡಾಗಳನ್ನು ಬಳಸಿಕೊಳ್ಳುವಂತಿಲ್ಲ. ಗಿರವಿ ಅಂಗಡಿಯರು, ಮೈಕ್ರೋ ಫೈನಾನ್ಸ್ ನವರು ಕಾನೂನು ಪಾಲಿಸಬೇಕು. ಕಾಣೂನು ಉಲ್ಲಂಘಿಸುವವ ವಿರುದ್ದ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುವುದು. ಇಂದು ನಡೆದ ಸಭೆಯಲ್ಲಿ ಎಚ್ಚರಿಕೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಹೊಸ ಕಾನೂನು ಜಾರಿಗೆ ತರಲಾಗುವುದು. ಕಾನೂನು ಉಲ್ಲಂಘಿಸುವವರ ವಿರುದ್ಧ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಕಾನೂನು ಸಚಿವ ಹೆಚ್.ಕೆ. ಪಾಟೀಲ್. ಕಂದಾಯ ಸಚಿವ ಕೃಷ್ಣ ಬೈರೇಗೌಡ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಸೇರಿದಂತೆ ಹಲವರು ಭಾಗಿಯಾಗಿದ್ದರು.

BREAKING : ಮೈಕ್ರೋ ಫೈನಾನ್ಸ್ ಸಿಬ್ಬಂದಿ ವಿರುದ್ಧ `CM ಸಿದ್ದರಾಮಯ್ಯ' ಗರಂ.! BREAKING: Cm Siddaramaiah announces new law through ordinance to avoid 'harassment of microfinance staff'
Share. Facebook Twitter LinkedIn WhatsApp Email

Related Posts

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಉದ್ಯೋಗಕ್ಕಾಗಿ ‘ಆದಿದ್ವಾರ’ ಆಪ್’ ಬಿಡುಗಡೆ

1 Min Read
vidhana soudha

BIG NEWS : ರಾಜ್ಯ ಶಿಕ್ಷಣ ನೀತಿ ಜಾರಿಗೆ ಸಂಪುಟ ಉಪಸಮಿತಿ ರಚನೆಗೆ ಸರ್ಕಾರ ನಿರ್ಧಾರ.!

1 Min Read

BIG NEWS : 2026-27ನೇ ಸಾಲಿನ ರಾಜ್ಯ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ : ಮೇ.29 ರಿಂದ ಶಾಲೆಗಳು ಪುನರಾರಂಭ.!

2 Mins Read
Recent News

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಉದ್ಯೋಗಕ್ಕಾಗಿ ‘ಆದಿದ್ವಾರ’ ಆಪ್’ ಬಿಡುಗಡೆ

vidhana soudha

BIG NEWS : ರಾಜ್ಯ ಶಿಕ್ಷಣ ನೀತಿ ಜಾರಿಗೆ ಸಂಪುಟ ಉಪಸಮಿತಿ ರಚನೆಗೆ ಸರ್ಕಾರ ನಿರ್ಧಾರ.!

BIG NEWS : 2026-27ನೇ ಸಾಲಿನ ರಾಜ್ಯ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ : ಮೇ.29 ರಿಂದ ಶಾಲೆಗಳು ಪುನರಾರಂಭ.!

BIG NEWS : ಕೇಂದ್ರ ಸರ್ಕಾರದ `ಜಿ ರಾಮ್ ಜಿ’ ವಿರುದ್ಧ ಕೋರ್ಟ್ ಗೆ ಮೊರೆ : ಸಚಿವ ಸಂಪುಟ ಮಹತ್ವದ ನಿರ್ಧಾರ

State News
KARNATAKA

ರಾಜ್ಯದ `ವಿಶೇಷ ಚೇತನರಿಗೆ ಗುಡ್ ನ್ಯೂಸ್’ :  ಉದ್ಯೋಗಕ್ಕಾಗಿ ‘ಆದಿದ್ವಾರ’ ಆಪ್’ ಬಿಡುಗಡೆ

By kannadanewsnow57 KARNATAKA 1 Min Read

ಬೆಂಗಳೂರು: ವಿಶೇಷ ಚೇತನರಿಗೆ ಉದ್ಯೋಗಾವಕಾಶಗಳು ಹಾಗೂ ಕೌಶಲ್ಯಾಭಿವೃದ್ಧಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ‘ಆದಿದ್ವಾರ’ (Adidwara) ಎಂಬ ಹೊಸ…

vidhana soudha

BIG NEWS : ರಾಜ್ಯ ಶಿಕ್ಷಣ ನೀತಿ ಜಾರಿಗೆ ಸಂಪುಟ ಉಪಸಮಿತಿ ರಚನೆಗೆ ಸರ್ಕಾರ ನಿರ್ಧಾರ.!

BIG NEWS : 2026-27ನೇ ಸಾಲಿನ ರಾಜ್ಯ ಶಾಲಾ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ : ಮೇ.29 ರಿಂದ ಶಾಲೆಗಳು ಪುನರಾರಂಭ.!

BIG NEWS : ಕೇಂದ್ರ ಸರ್ಕಾರದ `ಜಿ ರಾಮ್ ಜಿ’ ವಿರುದ್ಧ ಕೋರ್ಟ್ ಗೆ ಮೊರೆ : ಸಚಿವ ಸಂಪುಟ ಮಹತ್ವದ ನಿರ್ಧಾರ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.