ಬಳ್ಳಾರಿ : ಇತ್ತೀಚಿಗೆ ಬಳ್ಳಾರಿಯಲಿ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮೃತರ ಕುಟುಂಬಸ್ಥರಿಗೆ ಸಿಎಂ ಸಿದ್ದರಾಮಯ್ಯ ಅವರು 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ ಘೋಷಣೆ ಮಾಡಿದ್ದಾರೆ.
ಪ್ರಕರಣದ ಕುರಿತು ಮಾತನಾಡಿದ ಅವರು ಬಳ್ಳಾರಿಯಲ್ಲಿ ಕಳೆದ ಒಂದು ತಿಂಗಳಲ್ಲಿ ಐದು ಬಾಣಂತಿಯರ ಸಾವಾಗಿದೆ.ಈ ಕುರಿತಂತೆ ಕ್ಯಾಬಿನೆಟ್ ಸಭೆಯಲ್ಲಿ ಕಳಪೆ ಔಷಧ ನೀಡಿದ್ದರಿಂದ ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಮೊದಲು ಎರಡು ಲಕ್ಷ ಪರಿಹಾರ ಘೋಷಿಸಿದ್ದೆ. ಈಗ ಪರಿಹಾರದ ಮೊತ್ತ ಹೆಚ್ಚಿಸಿದ್ದು, ಮೃತ ಕುಟುಂಬಸ್ಥರಿಗೆ 5 ಲಕ್ಷ ರೂಪಾಯಿ ನೀಡಲಾಗುತ್ತೆ ಅಂತ ಸಿಎಂ ಸಿದ್ದರಾಮಯ್ಯ ಘೋಷಿಸಿದರು.