ಕಲಬುರ್ಗಿ : ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುತ್ತೇವೆ ಎಂದು ಕಲ್ಬುರ್ಗಿಯಲ್ಲಿ ಸಂಪುಟ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ತಿಳಿಸಿದರು.ಕಲ್ಬುರ್ಗಿಯಲ್ಲಿ ಇಂದು ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗವಹಿಸಿ, ಬಳಿಕ ಮಿನಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರಕ್ಕೆ ಬಂದ ನಂತರ ನಾವು ನುಡಿದಂತೆ ನಡೆದಿದ್ದೇವೆ. ಪ್ರತಿ ವರ್ಷ 5,000 ಕೋಟಿ ಅನುದಾನ ಕೊಡಬೇಕೆಂದು ತೀರ್ಮಾನ ಮಾಡಿದ್ದೇವೆ ಎಂದು ಅವರು ತಿಳಿಸಿದರು.
ಹೈದರಾಬಾದ್ ಕರ್ನಾಟಕ ಭಾಗಕ್ಕೆ ಕೇಂದ್ರ ಸರ್ಕಾರ ಯಾವುದೇ ಅನುದಾನವನ್ನು ಕೊಟ್ಟಿಲ್ಲ.ಕೃಷಿ ಇಲಾಖೆಗೆ 100 ಕೋಟಿ ರೂಪಾಯಿ ಅನುದಾನ ಮೀಸಲು ಇಟ್ಟಿದ್ದೇವೆ. ಬಜೆಟ್ ಅಲ್ಲಿ ಘೋಷಿಸಿದ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಎಂದು ಸಚಿವ ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಸಚಿವರು ಈ ಭಾಗದ ಶಾಸಕರು ಸಂಪುಟ ಸಭೆಗೆ ಒತ್ತಾಯಿಸಿದರು.ಹೀಗಾಗಿ ಕಲಬುರಗಿಯಲ್ಲಿಯೇ ಸಂಪುಟ ಸಭೆ ಮಾಡೋಣ ಎಂದಿದ್ದೆ. ಯುಪಿಎ ಸರ್ಕಾರ ಇದ್ದಾಗ 371 ಜೆ ವಿಶೇಷ ಸ್ಥಾನಮಾನ ಸಿಕ್ಕಿದೆ. ಡಾ. ಮನಮೋಹನ್ ಸಿಂಗ್ ಅವಧಿಯಲ್ಲಿ ಸಂವಿಧಾನದಲ್ಲಿ ಸೇರ್ಪಡೆಯಾಗಿದೆ. 371 ಜೆ ವಿಶೇಷ ಸ್ಥಾನಮಾನ ಜಾರಿಯಾಗಿ ಆಗಿ 10 ವರ್ಷಗಳು ಆಗಿವೆ. ಇಂದು ದಶಮಾನೋತ್ಸವ ಕಾರ್ಯಕ್ರಮ ಕೂಡ ಹಮ್ಮಿಕೊಂಡಿದ್ದೆವು ಎಂದು ಕಲಬುರ್ಗಿಯಲ್ಲಿ ಸಂಪುಟ ಸಭೆಯ ಬಳಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಸಂಪುಟ ಸಭೆಯಲ್ಲಿ 56 ವಿಷಯಗಳ ಕುರಿತು ಚರ್ಚಿಸಿದ್ದೇವೆ ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದಂತೆ 46 ವಿಷಯಗಳು ಬಗ್ಗೆ ಚರ್ಚಿಸಲಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಒಟ್ಟು ಮೊತ್ತ 11,770 ಕೋಟಿ ರೂಪಾಯಿ. ಬೀದರ್ ರಾಯಚೂರು ನಗರಸಭೆ ಮೇಲ್ದರ್ಜೆಗೆ ಏರಿಸಲು ನಿರ್ಧಾರ ಮಾಡಲಾಗಿದೆ ನಗರಸಭೆಯಿಂದ ನಗರಪಾಲಿಕೆಯಾಗಿ ಏರಿಸಲು ನಿರ್ಧರಿಸಲಾಗಿದೆ.
ಬೀದರ್ ಕಲಬುರ್ಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಯೋಜನೆ, 7200 ಕೋಟಿ ರೂಪಾಯಿ ವೆಚ್ಚದಲ್ಲಿ ಕುಡಿಯುವ ನೀರಿನ ಯೋಜನೆ ನಾರಾಯಣಪುರ ಜಲಾಶಯದಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತೆ.ಈ ಯೋಜನೆ ಬಗ್ಗೆ ಕೇಂದ್ರ ಸರ್ಕಾರಕ್ಕೂ ಕೂಡ ಮಾಹಿತಿ ನೀಡಿದ್ದೇವೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಮಪಾಲು ಅನುದಾನ ನೀಡಬೇಕು ಎಂದರು.
ಇಂದು ಬೆಳಿಗ್ಗೆ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾಗಿದ್ದೆ. ಸ್ವತಂತ್ರ ಭಾರತದಲ್ಲಿ ಹೈದರಾಬಾದ್ ಕರ್ನಾಟಕ ವಿಲೀನ ವಾಗಿರಲಿಲ್ಲ. ಬೀದರ್, ಕಲಬುರ್ಗಿ ರಾಯಚೂರು ವಿಲೀನ ವಾಗಿರಲಿಲ್ಲ. ಹೈದರಾಬಾದ್ ನಿಜಾಮರ ಆಡಳಿತದಲ್ಲಿ ಮುಂದುವರೆದಿತ್ತು. ಬೆಳಿಗ್ಗೆ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯಲ್ಲಿ ಭಾಗಿಯಾಗಿದ್ದೆ.