ಬೆಂಗಳೂರು : ರಾಜ್ಯದಲ್ಲಿ ಕೊರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿಲ್ಲ ಕೆಮ್ಮು, ಶೀತ, ಇನ್ನಿತರ ಖಾಯಿಲೆಯಿಂದ ಬಳಲುತ್ತಿರುವವರು ಹಾಗೂ ಗರ್ಭಿಣಿಯರು ಮಾಸ್ಕ್ ಧರಿಸಿ ಎಂದು ಹೇಳಿದ್ದೇವೆ ಎಂದರು.
ಕೇಂದ್ರ ಸರ್ಕಾರ ಯಾವುದೇ ಮಾರ್ಗಸೂಚಿ ಹೊರಡಿಸಿಲ್ಲ. ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.