ಹುಬ್ಬಳ್ಳಿ : ರಾಜ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ವಿಚಾರವಾಗಿ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಳ್ಳು ಕೇಸ್ ಇದ್ದಿದ್ದರಿಂದ ಉದ್ದೇಶಪೂರ್ವಕವಾಗಿ ಮೊಕದ್ದಮೆ ಹಾಕಿದ್ದಾರೆ. ಹೋರಾಟ ಮಾಡಿದಾಗ ಕೇಸ್ ಹಾಕಿದ್ದರೆ ವಾಪಸ್ ತೆಗೆದುಕೊಳ್ಳುವ ಅವಕಾಶವಿದೆ ಎಂದು ಹುಬ್ಬಳ್ಳಿಯ ಏರ್ಪೋರ್ಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲರ ಕಾಲದಲ್ಲೂ ಪ್ರಕರಣ ವಾಪಸ್ ಪಡೆದ ಉದಾಹರಣೆಗಳಿವೆ ಸುಳ್ಳು. ಕೇಸ್ ಇದೆ ಎಂಬ ಕಾರಣಕ್ಕೆ ವಾಪಸ್ ಪಡೆಯಲಾಗಿದೆ. ಕೋರ್ಟ್ ಅವಕಾಶ ಕೊಟ್ಟರೆ ಮಾತ್ರ ಕೇಸ್ ಹಿಂಪಡೆಯುತ್ತೇವೆ. ನಮ್ಮ ಕ್ಯಾಬಿನೆಟ್ ನಿರ್ಧಾರವನ್ನು ನ್ಯಾಯಾಲಯಕ್ಕೆ ತಿಳಿಸುತ್ತೇವೆ ಎಂದರು.
ನ್ಯಾಯಾಲಯ ಒಪ್ಪಿದರೆ ಮಾತ್ರ ಕೇಸ್ ವಾಪಸ್ ಆಗುತ್ತದೆ ಸುಖಾ ಸುಮ್ಮನೆ ಬಿಜೆಪಿಯವರು ಪ್ರತಿಭಟನೆ ಮಾಡುತ್ತಾರೆ. ಸಂಪುಟ ಸಭೆಯಲ್ಲಿ ಹುಬ್ಬಳ್ಳಿ ಗಲಭೆ ಕೇಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 43 ಕೇಸ್ ಗಳನ್ನು ಹಿಂಪಡೆಯಲಾಗಿದೆ.ಆದರೆ ಬಿಜೆಪಿ ಸುಮ್ಮನೆ ಪ್ರತಿಭಟನೆ ಮಾಡುತ್ತಿದೆ ಎಂದು ಹುಬ್ಬಳ್ಳಿಯ ಏರ್ಪೋರ್ಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದರು.
ಸಿಎಂಗೆ ‘ಕಪ್ಪುಪಟ್ಟಿ’ ಪ್ರದರ್ಶನ
ರಾಜ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ವಿಚಾರವಾಗಿ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಸಿಎಂ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಿದರು. ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಬಿಜೆಪಿ ಕಾರ್ಯಕರ್ತರಾದ ಜಗದೀಶ್ ಕಂಬಳಿ, ಮಂಜುನಾಥ್ ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.