ಬೆಂಗಳೂರು : ಮಹಾರಾಷ್ಟ್ರದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದು, ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಸಿಎಂ ಸಿದ್ದರಾಮಯ್ಯ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರ ವಿಮಾನ ಅಪಘಾತದ ದುರಂತ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನವು ಸಾರ್ವಜನಿಕ ಜೀವನಕ್ಕೆ ಅಪಾರ ನಷ್ಟವಾಗಿದೆ.ಅವರ ಕುಟುಂಬ, ಸಹೋದ್ಯೋಗಿಗಳು ಮತ್ತು ಬೆಂಬಲಿಗರಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಮತ್ತು ಅವರ ಪ್ರೀತಿಪಾತ್ರರು ಈ ಸರಿಪಡಿಸಲಾಗದ ನಷ್ಟವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಪಡೆಯಲಿ ಎಂದು ಪೋಸ್ಟ್ ಮಾಡಿದ್ದಾರೆ.
Deeply saddened by the tragic demise of Deputy Chief Minister of Maharashtra Shri Ajit Pawar in the aircraft crash. His passing is a profound loss to public life.
My heartfelt condolences to his family, colleagues, and supporters. May his soul rest in peace, and may his loved… pic.twitter.com/6bmWKJFzD3
— Siddaramaiah (@siddaramaiah) January 28, 2026
ಮಹಾರಾಷ್ಟ್ರದ ಬಾರಾಮತಿಯಲ್ಲಿ ಬುಧವಾರ ಬೆಳಿಗ್ಗೆ ವಿಮಾನ ಅಪಘಾತಕ್ಕೀಡಾಗಿದೆ.ಅಜಿತ್ ಪವಾರ್ ಭದ್ರತಾ ಅಧಿಕಾರಿ, ಓರ್ವ ಸಹಾಯಕ, ಇಬ್ಬರು ಪೈಲಟ್ ಗಳು, ಓರ್ವ ಕ್ಯಾಬಿನ್ ಕ್ರ್ಯೂ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ.
ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಘಟನೆಯ ವಿಡಿಯೋ ವೈರಲ್ ಆಗಿದೆ.
ಅಜಿತ್ ಪವಾರ್ ಅವರು ಮುಂಬೈನಿಂದ ತಮ್ಮ ಸ್ವಕ್ಷೇತ್ರವಾದ ಬಾರಾಮತಿಗೆ ನಾಲ್ಕು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದರು. ವಿಮಾನವು ರನ್‌ವೇಯಲ್ಲಿ ಇಳಿಯುವ ಸಮಯದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ತುರ್ತು ಲ್ಯಾಂಡಿಂಗ್‌ಗೆ ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಪಕ್ಕಕ್ಕೆ ಸರಿದು ಸ್ಫೋಟಗೊಂಡಿದೆ ಎಂದು ವರದಿಯಾಗಿದೆ.
ವಿಮಾನದಲ್ಲಿದ್ದ ಅಜಿತ್ ಪವಾರ್ ಸೇರಿದಂತೆ ಅವರ ಭದ್ರತಾ ಸಿಬ್ಬಂದಿ ಮತ್ತು ಪೈಲಟ್‌ಗಳು ಮೃತಪಟ್ಟಿದ್ದಾರೆ.ವಿಮಾನವು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.








