ಬೆಂಗಳೂರು : ಹಾಸನ ಜಿಲ್ಲೆಯಲ್ಲಿ ಮೈಸೂರಿಗೆ ತೆರಳಿ, ಹಾಸನಕ್ಕೆ ಮರಳುತ್ತಿದ್ದಂತ ವೇಳೆಯಲ್ಲಿ ಕಾರು ಅಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಹರ್ಷವರ್ಧನ್ ಅವರ ಸಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಂತಾಪ ಸೂಚಿಸಿದ್ದಾರೆ.
ಟ್ವಿಟ್ ನಲ್ಲಿ ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು. ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ ಕಠಿಣ ಪರಿಶ್ರಮ ಫಲ ನೀಡುವ ಹೊತ್ತಲ್ಲಿ ಹೀಗಾಗಬಾರದಿತ್ತು.ಹರ್ಷಬರ್ಧನ್ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಮೃತನ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.
ಘಟನೆ ಹಿನ್ನೆಲೆ?
ಹಾಸನ ಜಿಲ್ಲೆಯಲ್ಲಿ ಮೈಸೂರಿಗೆ ತೆರಳಿ, ಹಾಸನಕ್ಕೆ ಮರಳುತ್ತಿದ್ದಂತ ವೇಳೆಯಲ್ಲಿ ಕಾರು ಅಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ನಿನ್ನೆ ಮೈಸೂರಿನಲ್ಲಿ ಐಜಿಪಿಯವರನ್ನು ಭೇಟಿಯಾಗಿ ಹಾಸನ ಡಿವೈಎಸ್ಪಿಯಾಗಿ ವರ್ಗಾವಣೆಯಾಗಿದ್ದ ಕಾರಣ, ವರದಿ ಮಾಡಿಕೊಳ್ಳಲು ಜಿಲ್ಲಾ ಪೊಲೀಸ್ ಕಚೇರಿಗೆ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಹಾಸನ ತಾಲ್ಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿಯಲ್ಲಿ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು.
ಕಾರು ಅಪಘಾತದಲ್ಲಿ ಗಾಯಗೊಂಡಿದ್ದಂತ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅಲ್ಲದೇ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯುವ ಸ್ಥಿತಿಯಲ್ಲೂ ಅವರು ಇರಲಿಲ್ಲ. ಇದರ ನಡುವೆ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದರು. ಕ್ಷಣ ಕ್ಷಣಕ್ಕೆ ಅವರ ಸ್ಥಿತಿ ಗಂಭೀರಗೊಂಡಿತ್ತು. ಈಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಹಾಸನ – ಮೈಸೂರು ಹೆದ್ದಾರಿಯ ಕಿತ್ತಾನೆ ಗಡಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಅವರು ನಿಧನರಾದ ವಿಷಯ ತಿಳಿದು ದುಃಖವಾಯಿತು.
ಐಪಿಎಸ್ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಲು ತೆರಳುತ್ತಿದ್ದ ವೇಳೆ ಇಂಥದ್ದೊಂದು ದುರ್ಘಟನೆ ಜರುಗಿದೆ ಎನ್ನುವುದು ಬಹಳಾ ಬೇಸರದ ಸಂಗತಿ. ವರ್ಷಗಳ ಕಠಿಣ ಪರಿಶ್ರಮ ಫಲ… pic.twitter.com/VwU86Irabi
— Siddaramaiah (@siddaramaiah) December 2, 2024