ಬೆಂಗಳೂರು : ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಆತ್ಮೀಯ ಸ್ನೇಹಿತರಾಗಿದ್ದ ಬಯ್ಯಾರೆಡ್ಡಿಯವರು ಭೇಟಿಯಾದಾಗೆಲ್ಲ ದೇಶದ ರೈತರು ಮತ್ತು ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿದ್ದರು. ಈ ಸಮುದಾಯಗಳಿಗೆ ನ್ಯಾಯ ಕೊಡಿಸಲು ತಮ್ಮ ಬದುಕನ್ನು ಅರ್ಪಿಸಿಕೊಂಡಿದ್ದ ಬಯ್ಯಾರೆಡ್ಡಿಯವರು ಒಬ್ಬ ದಣಿವರಿಯದೆ ಇದ್ದ ಜನಪರ ಹೋರಾಟಗಾರ. ಅವರ ಕುಟುಂಬ ವರ್ಗ ಮತ್ತು ಹಿತೈಷಿಗಳ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಹೇಳಿದ್ದಾರೆ.
ಸಿಪಿಐ(ಎಂ) ನಾಯಕ ಮತ್ತು ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷರಾದ ಜಿ.ಸಿ.ಬಯ್ಯಾರೆಡ್ಡಿ ಅವರ ನಿಧನದದಿಂದ ದು:ಖಿತನಾಗಿದ್ದೇನೆ.
ಆತ್ಮೀಯ ಸ್ನೇಹಿತರಾಗಿದ್ದ ಬಯ್ಯಾರೆಡ್ಡಿಯವರು ಭೇಟಿಯಾದಾಗೆಲ್ಲ ದೇಶದ ರೈತರು ಮತ್ತು ಕಾರ್ಮಿಕರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ಮಾತನಾಡುತ್ತಿದ್ದರು. ಈ ಸಮುದಾಯಗಳಿಗೆ ನ್ಯಾಯ ಕೊಡಿಸಲು ತಮ್ಮ ಬದುಕನ್ನು… pic.twitter.com/KGLxnpq0KJ
— Siddaramaiah (@siddaramaiah) January 4, 2025