ಬೆಂಗಳೂರು : ಕನ್ನಡದ ಹಿರಿಯ ಸಾಹಿತಿ ಹೆಚ್.ಎಸ್.ವೆಂಕಟೇಶ್ ಮೂರ್ತಿಯವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು,ಹಿರಿಯ ಸಾಹಿತಿ ಹೆಚ್.ಎಸ್.ವೆಂಕಟೇಶ್ ಮೂರ್ತಿಯವರ ನಿಧನ ನೋವುಂಟುಮಾಡಿದೆ. ಕವಿತೆ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ, ಪ್ರಬಂಧ, ಕಾದಂಬರಿ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತೊಡಗಿಸಿಕೊಂಡು, ಅಪಾರ ಓದುಗ ಬಳಗ ಹೊಂದಿದ್ದ ವಿಶಿಷ್ಟ ಬರಹಗಾರ ವೆಂಕಟೇಶ ಮೂರ್ತಿಯವರ ಅಗಲಿಕೆಯಿಂದ ಸಾರಸ್ವತ ಲೋಕ ಬಡವಾಗಿದೆ.ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲೆಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.
ಹಿರಿಯ ಸಾಹಿತಿ ಹೆಚ್.ಎಸ್.ವೆಂಕಟೇಶ್ ಮೂರ್ತಿಯವರ ನಿಧನ ನೋವುಂಟುಮಾಡಿದೆ. ಕವಿತೆ, ನಾಟಕ, ಮಕ್ಕಳ ಸಾಹಿತ್ಯ, ಅನುವಾದ, ಪ್ರಬಂಧ, ಕಾದಂಬರಿ ಹೀಗೆ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ತೊಡಗಿಸಿಕೊಂಡು, ಅಪಾರ ಓದುಗ ಬಳಗ ಹೊಂದಿದ್ದ ವಿಶಿಷ್ಟ ಬರಹಗಾರ ವೆಂಕಟೇಶ ಮೂರ್ತಿಯವರ ಅಗಲಿಕೆಯಿಂದ ಸಾರಸ್ವತ ಲೋಕ ಬಡವಾಗಿದೆ.
ಮೃತರ ಆತ್ಮಕ್ಕೆ ಚಿರಶಾಂತಿ… pic.twitter.com/Neac59goKf
— Siddaramaiah (@siddaramaiah) May 30, 2025