ಬೆಂಗಳೂರು : ಪಾಕಿಸ್ತಾನದ ವಿರುದ್ಧ ಭರ್ಜರಿ ಗೆಲುವು ಸಾಧಿಸುವ ಮೂಲಕ 9ನೇ ಬಾರಿಗೆ ಏಷ್ಯಾಕಪ್ ಗೆದ್ದ ಟೀಂ ಇಂಡಿಯಾಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ,ಏಷ್ಯಾಕಪ್ ವಿಜೇತ ಭಾರತೀಯ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು.ಇಡೀ ಪಂದ್ಯಾವಳಿಯಲ್ಲಿ ಅಜೇಯರಾಗುಳಿದು, ಮತ್ತೊಮ್ಮೆ ಪಾಕಿಸ್ತಾನವನ್ನು ಬಗ್ಗುಬಡಿದು ಪ್ರಶಸ್ತಿ ಮುಡಿಗೇರಿಸಿಕೊಂಡ ನಮ್ಮವರ ಆಟ ಬಹುಕಾಲ ನೆನಪಿನಲ್ಲಿ ಉಳಿಯುವಂತದ್ದು. ಒತ್ತಡದ ಸಮಯದಲ್ಲಿ ಸಂಯಮದ ಆಟ ಆಡಿದ ತಿಲಕ್ ವರ್ಮಾ, ಅಮೋಘ ಬೌಲಿಂಗ್ ಪ್ರದರ್ಶನ ನೀಡಿ ಕಡಿಮೆ ಮೊತ್ತಕ್ಕೆ ಎದುರಾಳಿಗಳನ್ನು ಕಟ್ಟಿಹಾಕಿದ ಕುಲ್ದೀಪ್ ಯಾದವ್ ಮತ್ತು ನಿರ್ಣಾಯಕ ಪಂದ್ಯದಲ್ಲಿ ತಂಡ ತೋರಿದ ಸಂಘಟಿತ ಹೋರಾಟದಿಂದ ಭಾರತ ಗೆದ್ದಿದೆ. ಯುವ ಆಟಗಾರರೇ ತುಂಬಿದ್ದ ಭಾರತೀಯ ತಂಡ ದೊಡ್ಡ ಸಾಧನೆ ಮಾಡಿ, ಇತಿಹಾಸ ಸೃಷ್ಟಿಸಿದೆ.
https://twitter.com/siddaramaiah/status/1972371870092845274
ದುಬೈನಲ್ಲಿ ನಡೆದ ಏಷ್ಯಾಕಪ್ ಫೈನಲ್ನಲ್ಲಿ ಪಾಕಿಸ್ತಾನವನ್ನು ರೋಮಾಂಚಕ ರೀತಿಯಲ್ಲಿ ಸೋಲಿಸಿ 9ನೇ ಬಾರಿಗೆ ಏಷ್ಯಾಕಪ್ ಗೆದ್ದುಕೊಂಡಿತು. ಕುಲ್ದೀಪ್ ಯಾದವ್ ಅವರ ಮಾರಕ ಬೌಲಿಂಗ್ (4/30) ಮತ್ತು ತಿಲಕ್ ವರ್ಮಾ ಅವರ ಹೋರಾಟದ ಅರ್ಧಶತಕದ (69 ನಾಟ್ ಔಟ್) ನೆರವಿನಿಂದ ಟೀಂ ಇಂಡಿಯಾ ಪಂದ್ಯ ಮತ್ತು ಪ್ರಶಸ್ತಿಯನ್ನು 5 ವಿಕೆಟ್ಗಳಿಂದ ಗೆದ್ದುಕೊಂಡಿತು.