ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನದ ಬಾವುಟ ಹಿಡಿದು ನೃತ್ಯ ಮಾಡುತ್ತಿರುವ ರೀತಿಯಲ್ಲಿ ಒಂದು ವಿಡಿಯೋ ಸೃಷ್ಟಿಸಿ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಮಾಡಿ ವಿಕೃತಿ ಮೆರೆಯಲಾಗಿದೆ. ಆದರೆ ಇದು AI ತಂತ್ರಜ್ಞಾನ ಬಳಸಿ ರಚಿಸಲಾದ ವಿಡಿಯೋ ಎನ್ನಲಾಗಿದೆ.
ಹೌದು ಎಐ ತಂತ್ರಜ್ಞಾನ ಬಳಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಕಿಸ್ತಾನದ ಬಾವುಟ ಹಿಡಿದು ನೃತ್ಯ ಮಾಡುತ್ತಿರುವ ರೀತಿಯಲ್ಲಿ ಒಂದು ವಿಡಿಯೋ ಸೃಷ್ಟಿಸಿ ʼನಮ್ಮ ಮೋದಿʼ ಎಂಬ ಫೇಸ್ಬುಕ್ ಪುಟದಲ್ಲಿ ಪೋಸ್ಟ್ ಮಾಡಿ ವಿಕೃತಿ ಮೆರೆಯಲಾಗಿದೆ.
ರಾಜ್ಯದ ಮುಖ್ಯಮಂತ್ರಿಯೋರ್ವರ ಕೈಗೆ ಪಾಕಿಸ್ತಾನದ ಧ್ವಜ ಕೊಟ್ಟಿರುವಂತೆ AI ವೀಡಿಯೊ ಸೃಷ್ಟಿಸಿರುವುದಕ್ಕೆ ಸಾರ್ವಜನಿಕರು ಖಂಡಿಸಿದ್ದು, ರಾಜ್ಯದ ಮುಖ್ಯಮಂತ್ರಿಗಳನ್ನು ಗುರಿಪಡಿಸಿ ಹೀಗೆ ವಿಕೃತ ನಕಲಿ ವಿಡಿಯೋಗಳನ್ನು ನಡೆಸುತ್ತಿರುವವರ ಮೇಲೆ ತಕ್ಷಣ ಕಾನೂನು ಕ್ರಮ ಜರುಗಿಸಬೇಕೆಂದು ಪೊಲೀಸ್ ಇಲಾಖೆ, ಸೈಬರ್ ಅಪರಾಧ ವಿಭಾಗಕ್ಕೆ ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.