ನವದೆಹಲಿ: ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ.
ನವದೆಹಲಿಯ ಎಐಸಿಸಿ ಕಚೇರಿಯ ಇಂದಿರಾ ಭವನದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ.
ಈ ವೇಳೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ ಘಟನೆ ಬಗ್ಗೆ ವಿವರಿಸಿದ್ದಾರೆ.
ಇನ್ನೂ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರ ದೆಹಲಿ ಭೇಟಿಯ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಭಾರೀ ಬದಲಾವಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇಂದು ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸಿಎಂ, ಡಿಸಿಎಂ ಖಾತೆ ಬದಲಾಣೆ ಸೇರಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಚರ್ಚೆ ನಡೆಸುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಂಡ್ ಕರೆ ನೀಡಿರುವ ಬೆನ್ನಲೇ ಸಚಿವ ಸತೀಶ್ ಜಾರಕಿಹೊಳಿಗೂ ಹೈಕಮಾಂಡ್ ನಾಯಕರು ಬುಲಾವ್ ನೀಡಿದ್ದಾರೆ.