ಬೆಂಗಳೂರು : ವಿಧಾನಸಭೆ ಚುಣಾವಣೆ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ದೂರು ದಾಖಲಾಗಿದ್ದು, ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಗೆ ವಿಚಾರಣೆಗೆ ಹಾಜರಾಗಿದ್ದಾರೆ.
ಭಾರತೀಯ ಜನತಾ ವಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಕೇಶವ ಪ್ರಸಾದ್ ರವರು ದಿನಾಂಕ: 08.05.2023 ರಂದು 42ನೇ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು. ಇಂದು ಬೆಳಗ್ಗೆ 10.30ಕ್ಕೆ ಕೋರ್ಟ್ ದೂರಿನ ಕುರಿತು ವಿಚಾರಣೆ ನಡೆಸಲಿದ್ದು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಿಚಾರಣೆಗೆ ಹಾಜರಾಗಲಿದ್ದಾರೆ.
ಕರ್ನಾಟಕ ರಾಜ್ಯ ಸಾರ್ವತ್ರಿಕ ಚುನಾವಣೆ-2023 ವೇಳೆ ಕಾಂಗ್ರೆಸ್ ಪಕ್ಷದ ಮುಖಂಡರುಗಳಾದ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಮತ್ತು ರಾಹುಲ್ ಗಾಂಧಿ ರವರುಗಳು ರಾಜ್ಯದಲ್ಲಿ ಬಿಜೆಪಿ ಸರ್ಕಾರವು 2019 ರಿಂದ 2023 ರವರೆಗೆ ಭ್ರಷ್ಟ ಆಡಳಿತವನ್ನು ನೀಡಿರುತ್ತದೆ. ಅಂದರೆ ಸಿ.ಎಂ. ಹುದ್ದೆ- ರೂ.2500 ಕೋಟಿ, ಮಂತ್ರಿಗಳ ಹುದ್ದೆ- ರೂ. 500 ಕೋಟಿ ರೂಗಳನ್ನು ಬಿಜೆಪಿ ಹೈಕಮಾಂಡ್ ಗೆ ನೀಡಿ ಹುದ್ದೆ ಸ್ವೀಕಾರ ಮಾಡಿರುತ್ತಾರೆ. ಭ್ರಷ್ಟಾಚಾರ ಅಡಳಿತವನ್ನು ನೀಡಿರುತ್ತಾರೆ ಎಂದು ಆರೋಪಿಸಿದ್ದರು.ಈ ಹಿನ್ನೆಲೆ ಭಾರತೀಯ ಜನತಾ ವಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎಸ್. ಕೇಶವ ಪ್ರಸಾದ್ ರವರು ದಿನಾಂಕ: 08.05.2023 ರಂದು 42ನೇ ವಿಶೇಷ ನ್ಯಾಯಾಲಯಕ್ಕೆ ಖಾಸಗಿ ದೂರನ್ನು ನೀಡಿದ್ದರು. ಇಂದು ಕೋರ್ಟ್ ಈ ದೂರಿನ ವಿಚಾರಣೆ ನಡೆಸುತ್ತಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ವಿಚಾರಣೆಗೆ ಹಾಜರಾಗಿದ್ದಾರೆ.