ಚಿತ್ರದುರ್ಗ : ಬಯಲುಸೀಮೆ ಜನರ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ಇದೀಗ ವಾಣಿವಿಲಾಸ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು ಬಾಗಿನ ಅರ್ಪಿಸಿದರು.
ಹೌದು ವಾಣಿ ವಿಲಾಸ್ ಸಾಗರ ಜಲಾಶಯ ನಿರ್ಮಾಣವಾದ ದಿನದಿಂದ ಇಲ್ಲಿಗೆ ಮೂರನೇ ಬಾರಿ ಕೂಡಿ ಬಿದ್ದಿದ್ದು ಈ ಹಿನ್ನಲೆಯಲ್ಲಿ ಇಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಿರಿಯೂರು ತಾಲೂಕಿನಲ್ಲಿರುವ ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಸ್ಥಳೀಯ ಕಾಂಗ್ರೆಸ್ ಮುಖಂಡರೊಂದಿಗೆ ಗಂಗಾ ಮಾತೆಗೆ ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.
ವಾಣಿ ವಿಲಾಸ ಸಾಗರ ಕಡೆಗೂ ಕೋಡಿ ಬಿದ್ದಿದ್ದು, ಚಿತ್ರದುರ್ಗ ಜಿಲ್ಲೆಯ ರೈತರು ಫುಲ್ ಖುಷಿಯಾಗಿದ್ದಾರೆ. ಜಲಾಶಯ ನಿರ್ಮಾಣವಾದಾಗಿನಿಂದ ಮೂರು ಬಾರಿ ಭರ್ತಿಯಾಗಿದೆ. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸೆಂಬ ಡಿಕೆ ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಸೇರಿದಂತೆ ಹಲವು ಕಾಂಗ್ರೆಸ್ ಸಚಿವರು, ಶಾಸಕರು ಸ್ಥಳೀಯ ಮುಖಂಡರು ಕಾರ್ಯಕರ್ತರು ಈ ಒಂದು ಬಾಗಿನ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.