ಬೆಂಗಳೂರು : ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆಯನ್ನು ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಲ್ಸನ್ ಗಾರ್ಡನ್ ಪೊಲೀಸರು ಕೇಸ್ ದಾಖಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಗೆ ಬೆಂಗಳೂರಿನ 42ನೇ ACMM ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಹೌದು ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು ಕಾನೂನುಬಾಹಿರ ಪ್ರತಿಭಟನೆ ಹಿನ್ನೆಲೆಯಲ್ಲಿ ವಿಲ್ಸನ್ ಗಾರ್ಡನ್ ಪೊಲೀಸರು ಕೆಸ್ ದಾಖಲಿಸಿದ್ದರು. ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಗೆ ಬೆಂಗಳೂರಿನ 42ನೇ ಎಸಿಎಂಎಂ ಸಮನ್ಸ್ ನೀಡಲಾಗಿದ್ದು, ಆಗಸ್ಟ್ 29 ರಂದು ಖುದ್ದಾಗಿ ಹಾಜರಾಗುವಂತೆ ಇಬ್ಬರಿಗೂ ಇದೀಗ ಸಮನ್ಸ್ ನೀಡಲಾಗಿದೆ.
ಪ್ರಕರಣ ಹಿನ್ನೆಲೆ?
2022 ರಲ್ಲಿ ಪ್ರತಿ ಪಕ್ಷದಲ್ಲಿದ್ದಾಗ ರಾಹುಲ್ ಗಾಂಧಿ ವಿರುದ್ಧ ಇಡಿ ವಿಚಾರಣೆಯನ್ನು ಖಂಡಿಸಿ ಬೃಹತ್ ಪ್ರತಿಭಟನೆ ಮಾಡಿದ್ದರು. ಈ ಒಂದು ಪ್ರತಿಭಟನೆಗೆ ಸಂಬಂಧಿಸಿದಂತೆ ಕಾನೂನುಬಾಹಿರವಾಗಿ ಪ್ರತಿಭಟನೆ ಮಾಡಿದ್ದಾರೆ ಎಂದು ಬೆಂಗಳೂರಿನ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಕೇಸು ದಾಖಲಾಗುತ್ತದೆ. ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ 102 ಜನರ ಮೇಲೆ ಕೇಸ್ ದಾಖಲಾಗಿದ್ದು ಹೀಗಾಗಿ ಇಂದು ಬೆಂಗಳೂರಿನ 42ನೇ ಎಸಿಎಂ ನ್ಯಾಯಾಲಯ ಖುದ್ದು ಹಾಜರಾಗುವಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ 102 ಜನರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.