ಮೈಸೂರು : ಲೋಕಸಭೆ ಚುನಾವಣೆಯ ವೇಳೆ ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ 1 ಲಕ್ಷ್ಮ ಮತಗಳ್ಳತನ ಕುರಿತು ನಿನ್ನೆ ರಾಹುಲ್ ಗಾಂಧಿ ದಾಖಲೆ ಸಮೇತ ಬಯಲಿಗೆ ಎಳೆದಿದ್ದರು. ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಈ ಕುರಿತು ರಾಹುಲ್ ಗಾಂಧಿ ಇಂದು ಪ್ರತಿಭಟನೆ ಹಮ್ಮಿಕೊಂಡಿದ್ದು, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರು ಭಾಗಿಯಾಗಲಿದ್ದಾರೆ.
ರಾಹುಲ್ ಗಾಂಧಿ ನಿನ್ನೆ ಆರೋಪ ಮಾಡಿದ ಬೆನ್ನೆಲ್ಲೆ ಇದೀಗ ಮೈಸೂರು ಜಿಲ್ಲೆಯ ವರುಣ ಕ್ಷೇತ್ರದಲ್ಲಿ ಕೂಡ, ನಕಲಿ ವೋಟರ್ ಐಡಿ ಪತ್ತೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಇಂದು ಬಿಜೆಪಿಯಿಂದಲೂ ನಕಲಿ ವೋಟರ್ ಐಡಿ ಪತ್ತೆ ಮಾಡಿದೆ. ಸಿಎಂ ಸಿದ್ದರಾಮಯ್ಯ ಕ್ಷೇತ್ರದಲ್ಲಿ ನಕಲಿ ವೋಟರ್ ಐಡಿ ಆರೋಪ ಮಾಡಿದ್ದು ವರುಣ ಕ್ಷೇತ್ರದಲ್ಲಿ ವೋಟರ್ ಐಡಿ ಪತ್ತೆ ಮಾಡಿದ ಬಿಜೆಪಿ ಬೆಂಗಳೂರಿನ ಕಾಂಗ್ರೆಸ್ ನಾಯಕರು ಕ್ಷೇತ್ರದಲ್ಲೂ ನಕಲಿ ವೋಟರ್ ಐಡಿ ಪತ್ತೆ ಮಾಡಿದೆ. ಕಾಂಗ್ರೆಸ್ ವಿರುದ್ಧ ಬಿಜೆಪಿ ಆರೋಪಗಳ ಸುರಿಮಳೆಗೈದಿದ್ದು, ರಾಹುಲ್ ಗಾಂಧಿ ಆರೋಪಕ್ಕೆ ಉತ್ತರ ಕೊಡಲು ಇದೀಗ ಬಿಜೆಪಿ ರೆಡಿಯಾಗಿದೆ. ಸಂಜೆ ನಾಲ್ಕು ಗಂಟೆಗೆ ಬಿಜೆಪಿ ಕಚೇರಿಯಲ್ಲಿ ಕುರಿತು ಸುದ್ದಿಗೋಷ್ಠಿ ನಡೆಸಲಿದೆ