ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರು ಇಂದು ತಮ್ಮ ದಾಖಲೆಯ 16 ನೇ ರಾಜ್ಯ ಬಜೆಟ್-2025-26 ( Karnataka Budget 2024-25 ) ಅನ್ನು ಮಂಡಿಸುತ್ತಿದ್ದಾರೆ.
ಕುವೆಂಪು ಅವರ ಕವನದ ಮೂಲಕ ಬಜೆಟ್ ಮಂಡನೆ ಆರಂಭಿಸಿರುವ ಸಿಎಂ ಸಿದ್ದರಾಮಯ್ಯ ಅವರು, 6 ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುವುದು, ಗ್ಯಾರಂಟಿ ಯೋಜನೆಗಳ ಇತರ ಜನಪರ ಯೋಜನೆಗಳನ್ನು ಜಾರಿಗೆ ತರಲಾಗುವುದು. ಈ ಬಾರಿ ಬಜೆಟ್ 4 ಲಕ್ಷ ಕೋಟಿ ರೂ. ಇದೆ. ಕೃಷಿ ಮತ್ತು ಇನ್ನಿತರ ದಾಖಲೀಕರಣ ಸೇರಿದಂತೆ ಗ್ರಾಮೀಣ ಜನರ ಅಭಿವೃದ್ಧಿಗೆ ಶ್ರಮಿಸಲಾಗುವುದು, ಶಿಕ್ಷಣ, ಆರೋಗ್ಯಕ್ಕೆ ಒತ್ತು ನೀಡಲಾಗುವುದು, ನಗರಾಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಬೆಂಗಳೂರಿಗೆ ಅನುದಾನ 7 ಸಾವಿರ ಕೋಟಿಗೆ ಏರಿಕೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.