ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ ಅವರು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಸದಾಶಿವನಗರದಲ್ಲಿರುವ ಬಿ.ಕೆ.ಹರಿಪ್ರಸಾದ್ ಅವರ ನಿವಾಸದಲ್ಲಿ ಹರಿಪ್ರಸಾದ್ ಅವರನ್ನು ಭೇಟಿಯಾದರು. ಹರಿಪ್ರಸಾದ್ ಜೊತೆ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.
ಬಿ.ಕೆ.ಹರಿಪ್ರಸಾದ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಬ್ರೇಕ್ ಫಾಸ್ಟ್ ಸವಿದು, ಮಹತ್ವದ ಚರ್ಚೆ ನಡೆಸಿದ್ದಾರೆ. ಹರಿಪ್ರಸಾದ್ ನಿವಾಸದಲ್ಲಿ ಸಿಎಂ ಹಾಗೂ ಕಾಂಗ್ರೆಸ್ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್ ತೀವ್ರ ಕುತೂಹಲ ಮೂಡಿಸಿದೆ.