ಬೆಂಗಳೂರು : ಬೆಂಗಳೂರಲ್ಲಿ ಕಳೆದ ಕೆಲವು ದಿನಗಳಿಂದ ಭಾರಿ ಮಳೆ ಆಗುತ್ತಿದ್ದು ಬೆಂಗಳೂರಿನ ಪ್ರಮುಖ ರಸ್ತೆಗಳೆಲ್ಲವೂ ಸಂಪೂರ್ಣವಾಗಿ ಮಳೆ ನೀರಿನಿಂದ ತುಂಬಿಕೊಂಡು ನದಿಯಂತೆ ಆಗಿವೆ. ಇನ್ನು ಭಾರಿ ಮಳೆಯಿಂದಾಗಿ ಗೋಡೆ ಕೊಸಿದು ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದ್ದು, ಹಿನ್ನೆಲೆ ಇದೀಗ ಸಿಎಂ ಸಿದ್ದರಾಮಯ್ಯರ ಬೆಂಗಳೂರು ನಗರ ಪ್ರದಕ್ಷಿಣೆ ರದ್ದಾಗಿದೆ.
ಹೌದು ಮಳೆ ಹಾನಿ ಪ್ರದೇಶ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಂಗಳೂರು ನಗರ ಪ್ರದಕ್ಷಣೆ ರದ್ದಾಗಿದೆ. ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಬೇಕಿತ್ತು. ಆದರೆ ಬೆಂಗಳೂರಿನಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ಸಿಟಿ ರೌಂಡ್ಸ್ ಗೆ ತೊಂದರೆ ಆಗುತ್ತಿರುವ ಹಿನ್ನೆಲೆಯಲ್ಲಿ ಸಿಟಿ ರೌಂಡ್ಸ್ ರದ್ದಾಗಿದೆ.
ಬೆಂಗಳೂರಿನಲ್ಲಿ ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದೀಗ ಸಿಎಂ ಸಿದ್ದರಾಮಯ್ಯ ಸಿಟಿ ರೌಂಡ್ ಕ್ಯಾನ್ಸಲ್ ಮಾಡಿ ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ಕಂಟ್ರೋಲ್ ರೂಮ್ಗೆ ತೆರಳಿದ್ದಾರೆ. ವಿಶೇಷ ಬಸ್ ನಲ್ಲಿ ಕಂಟ್ರೋಲ್ ರೂಂಗೆ ಸಿದ್ದರಾಮಯ್ಯ ತೆರಳಿದ್ದಾರೆ. ಮಳೆ ಹಾನಿ ಪ್ರದೇಶಗಳ ಕುರಿತು ಸಿಎಂ ಸಿದ್ದರಾಮಯ್ಯನವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡ ನಂತರ ಸುದ್ದಿಗೋಷ್ಠಿ ನಡೆಸಲಿದ್ದಾರೆ ಎನ್ನುವ ಮಾಹಿತಿ ತಿಳಿದು ಬಂದಿದೆ.