ಬೆಂಗಳೂರು : ಕಾಂಗ್ರೆಸ್ನ ಎಲ್ಲ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ಕಾಂಗ್ರೆಸ್ ಶಾಸಕರಿರುವ ಕ್ಷೇತ್ರಗಳಿಗೆ 50 ಕೋಟಿ ಅನುದಾನ ಬಿಡುಗಡೆ ಸಂಬಂಧ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಶಾಸಕಾಂಗ ಪಕ್ಷದ ಕಚೇರಿಯಿಂದಲೂ ಶಾಸಕರಿಗೆ ಮಾಹಿತಿ ರವಾನೆಯಾಗಿದೆ. ವಿಧಾನಸಭಾ ಕ್ಷೇತ್ರದ ಕಾಮಗಾರಿಗಳ ಕುರಿತು ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದು ಜುಲೈ 30 ಮತ್ತು 31 ರಂದು ವಿಧಾನಸೌಧದಲ್ಲಿ ಪ್ರತ್ಯೇಕ ಸಭೆ ನಡೆಸಲಿದ್ದಾರೆ.
ಇದೀಗ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕರಿಗೆ ಬಂಪರ್ ಕೊಡುಗೆ ನೀಡಿದ್ದು ಶಾಸಕರ ಕ್ಷೇತ್ರಕ್ಕೆ ತಲಾ 50 ಕೋಟಿ ಅನುದಾನ ಬಿಡುಗಡೆ ಮಾಡಿದ್ದಾರೆ. ಲೋಕೋಪಯೋಗಿ ಇಲಾಖೆ, ರಸ್ತೆ, ಸೇತುವೆ ಕಾಮಗಾರಿ ಗ್ರಾಮೀಣ ರಸ್ತೆ, ನಗರ ಕಾಮಗಾರಿ ಗಳಿಗೆ 37.5 ಕೋಟಿ ಮೀಸಲು ಇಟ್ಟಿದ್ದು, ಇನ್ನು 12.5 ಕೋಟಿ ಅನುದಾನ ಶಾಸಕರ ವಿವೇಚನಾಧಿಕಾರಕ್ಕೆ ಮೀಸಲು ಇಡಲಾಗಿದೆ.
ಈ ವಿಚಾರವಾಗಿ ಎರಡು ದಿನಗಳ ಕಾಲ ಶಾಸಕರ ಜೊತೆಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಲಿದ್ದಾರೆ. ಜುಲೈ 30 ಮತ್ತು 31 ರಂದು ಸಿಎಂ ಸಿದ್ದರಾಮಯ್ಯ ಈ ವಿಚಾರವಾಗಿ ಶಾಸಕರ ಜೊತೆಗೆ ಸಭೆ ನಡೆಸಲಿದ್ದಾರೆ. ಶಾಸಕರು ಬೇಡಿಕೆ ಪತ್ರದೊಂದಿಗೆ ಕಾಮಗಾರಿ ವಿವರ ನೀಡಲು ಇದೇ ವೇಳೆ ಸೂಚನೆ ನೀಡಿದ್ದಾರೆ ಶಾಸಕರ ಅಸಮಾಧಾನ ತಡಿಸಲು ತಲಾ 50 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದಾರೆ. ಮೂಲ ಸೌಕರ್ಯ ಅಭಿವೃದ್ಧಿ ಯೋಜನೆ ಅನುದಾನ ಬಿಡುಗಡೆ ಮಾಡಲಾಗಿದೆ.