ಕಲಬುರಗಿ : ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ-2024′ ಪ್ರಯುಕ್ತ ಕಲಬುರಗಿಯ ಸಿಎಆರ್ ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.
ಸಿಎಂ ಸಿದ್ದರಾಮಯ್ಯ ಇಂದು ಕಲಬುರಗಿ ನಗರದ ಸಿಎಆರ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಉತ್ಸವದ ಧ್ವಜಾರೋಹಣ ನೆರವೇರಿಸಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಸಚಿವರಾದ ಶರಣ ಪ್ರಕಾಶ ಪಾಟೀಲ್, ಭೈರತಿ ಸುರೇಶ್, ಹೆಚ್.ಕೆ. ಪಾಟೀಲ್, ಡಿ. ಸುಧಾಕರ್, ಕೆ.ಹೆಚ್. ಮುನಿಯಪ್ಪ, ಕಲ್ಯಾಣ ಕರ್ನಾಟಕ ಅಭಿವೃದ್ಧ ಅಧ್ಯಕ್ಷ ಡಾ.ಅಜಯ್ ಸಿಂಗ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.