ಬೆಂಗಳೂರು : ರಾಜ್ಯದ 16 ಜಿಲ್ಲಾಸ್ಪತ್ರೆಗಳಲ್ಲಿ ಕಿಮೋಥಿರಪಿ ಘಟಕಗಳನ್ನು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ವರ್ಚುಯಲ್ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಕಿಮೋಥೆರಪಿ ಘಟಕಗಳನ್ನು ಲೋಕಾರ್ಪಣೆಗೊಳಿಸಿದ್ದಾರೆ.
ಇಂದು ಮೈಸೂರು ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಈ ಒಂದು ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಡೇ ಕೇರ್ ಕಿಮೋಥರಪಿ ಘಟಕಗಳ ಲೋಕಾರ್ಪಣೆಗೊಳಿಸಲಾಯಿತು. ಈ ಒಂದು ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೇರಿದಂತೆ ಹಲವರು ಈ ಒಂದು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕರ್ನಾಟಕ ಆರೋಗ್ಯ ಇಲಾಖೆಯು, ಕ್ಯಾನ್ಸರ್ ರೋಗಿಗಳಿಗೆ ಗುಡ್ನ್ಯೂಸ್ ನೀಡಿದೆ.
ಕರ್ನಾಟಕದ 16 ಜಿಲ್ಲಾಸ್ಪತ್ರೆಗಳಲ್ಲಿ ಡೇ ಕೇರ್ ಕೀಮೋಥೆರಪಿ ಆರಂಭವಾಗಲಿವೆ. ಇನ್ಮುಂದೆ ಜಿಲ್ಲಾ ಆಸ್ಪತ್ರೆಗಳಲ್ಲೂ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯಬಹುದು. ಪ್ರತಿ ವರ್ಷ ಹೊಸದಾಗಿ 70 ಸಾವಿರ ಕ್ಯಾನ್ಸರ್ ಪ್ರಕರಣ ದಾಖಲಾಗುತ್ತಿದೆ. ಬಡವರು ಕಡಿಮೆ ವೆಚ್ಚದಲ್ಲಿ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯಬೇಕು ಅಂದರೆ ಬೆಂಗಳೂರಿನ ಕಿದ್ವಾಯಿ ಅಂತಹ ಸಂಸ್ಥೆಗಳಿಗೆ ಬರಬೇಕು. ಇದೂ ಕೂಡ ಕಷ್ಟದ ಕೆಲಸ. ಹಾಗಾಗಿ ಬಡವರಿಗೆ ಅನುಕೂಲ ಆಗಲಿ ಎಂದು 16 ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ ಕೇರ್ ಓಪನ್ ಮಾಡಲಾಗಿದೆ.
ಆಪ್ತ ಸಮಾಲೋಚನೆ, ಮೆಡಿಕಲ್ ಅಂಕಾಲಜಿಸ್ಟ್, ವೈದ್ಯರು ಹಾಗೂ ಫಾರ್ಮಾಸಿ ಅಧಿಕಾರಿಗಳು ಕಿಮೋಥೆರಪಿ ಕೇಂದ್ರಗಳಲ್ಲಿ ಇರುತ್ತಾರೆ. ರೋಗಿಗಳು ಹೆಚ್ಚಾಗುತ್ತಿದೆ, ಪ್ರಯಾಣ ಮಾಡುವವರ ಸಂಖ್ಯೆ ಹೆಚ್ಚಿದೆ. ಶೇಕಡಾ 60ರಷ್ಟು ರೋಗಿಗಳು ಬೆಂಗಳೂರು ನಗರ, ಹುಬ್ಬಳ್ಳಿ, ಕಲಬುರಗಿ, ಬೆಳಗಾವಿ ಮತ್ತು ಮೈಸೂರಿನಲ್ಲಿ ಕಿಮೋಥೆರಪಿಗಾಗಿ 100 ಕಿ.ಮೀ. ದೂರು ಹೋಗಬೇಕು. ಲಾಜಿಸ್ಟಿಕ್ ಕಾರಣದಿಂದ ಹೆಚ್ಚಿನ ರೋಗಿಗಳು ಚಿಕಿತ್ಸೆಯಿಂದ ವಂಚಿತರಾಗುತ್ತಿದ್ದಾರೆ.
ಸಮಯ ಮತ್ತು ತೊಂದರೆ ಜೊತೆಗೆ ಖರ್ಚು ಹೆಚ್ಚಾಗುತ್ತಿದೆ. ಆದರೆ ಇನ್ಮುಂದೆ ಅಂತಹ ಸಮಸ್ಯೆಗಳು ಕಡಿಮೆ ಆಗಲಿದೆ. ಪ್ರತಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗಾಗಿ 10 ಬೆಡ್ ಮೀಸಲು ಇಡುತ್ತೇವೆ. ಅದಕ್ಕೆ ಇಬ್ಬರು ನರ್ಸ್ ಗಳು ಇರುತ್ತಾರೆ. ಅಲ್ಲದೇ ಆಪ್ತ ಸಮಾಲೋಚನೆ, ಮೆಡಿಕಲ್ ಅಂಕಾಲಜಿಸ್ಟ್, ವೈದ್ಯರು ಹಾಗೂ ಫಾರ್ಮಾಸಿ ಅಧಿಕಾರಿಗಳು ಇರುತ್ತಾರೆ. ಬಿಪಿಎಲ್ ಕುಟುಂಬಗಳಿಗೆ ಉಚಿತವಾಗಿ ಕಿಮೋಥೆರಪಿ ಸಿಗಲಿದೆ.
ಮೈಸೂರು ಜಿಲ್ಲಾಸ್ಪತ್ರೆಯ ಆವರಣದಲ್ಲಿ ಇಂದು "ಡೇ ಕೇರ್ ಕೀಮೋಥೆರಪು" ಘಟಕವನ್ನು ಜನಬಳಕೆಗೆ ಅರ್ಪಿಸಿದೆ.
ರಾಜ್ಯದ 16 ಜಿಲ್ಲೆಗಳ ಜಿಲ್ಲಾಸ್ಪತ್ರೆಗಳಲ್ಲಿ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ಹಾಗೂ ಇತರೆ ರೋಗಿಗಳಿಗೆ ರಿಯಾಯಿತಿ ದರದಲ್ಲಿ ಕ್ಯಾನ್ಸರ್ ಚಿಕಿತ್ಸಾ ಸೌಲಭ್ಯ ಒದಗಿಸುವ ಈ ಯೋಜನೆಯು ಸಾವಿರಾರು ಬಡರೋಗಿಗಳ ಪಾಲಿಗೆ ಸಂಜೀವಿನಿಯಾಗಲಿದೆ. pic.twitter.com/kpA6jcaVUG
— Siddaramaiah (@siddaramaiah) May 23, 2025