Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

ಪ್ರೀತಿಯ ಹಾದಿ ಹಿಡಿದ ಮಗಳು: ತಾಯಿಯ ಆತಂಕಕ್ಕೆ ಹೈಕೋರ್ಟ್ ನೀಡಿದ ತೀರ್ಪೇನು ಗೊತ್ತಾ?

BIG NEWS: ವೈದ್ಯರು ವಕೀಲರಾಗಬೇಕಿದ್ದರೆ ಮೆಡಿಕಲ್ ರಿಜಿಸ್ಟ್ರೇಷನ್ ಕ್ಯಾನ್ಸಲ್ ಕಡ್ಡಾಯ: ಹೈಕೋರ್ಟ್ ಮಹತ್ವದ ಆದೇಶ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING : ಕಲಬುರ್ಗಿಯ ‘ಹೈಟೆಕ್ ಜಯದೇವ ಹೃದ್ರೋಗ’ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ CM ಸಿದ್ದರಾಮಯ್ಯ
KARNATAKA

BREAKING : ಕಲಬುರ್ಗಿಯ ‘ಹೈಟೆಕ್ ಜಯದೇವ ಹೃದ್ರೋಗ’ ಆಸ್ಪತ್ರೆಯನ್ನು ಲೋಕಾರ್ಪಣೆಗೊಳಿಸಿದ CM ಸಿದ್ದರಾಮಯ್ಯ

By ಸುರೇಶ್‌

ಕಲಬುರ್ಗಿ : ಕಲ್ಯಾಣ ಕರ್ನಾಟಕ ಭಾಗದ ಕೇಂದ್ರವಾದ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯನ್ನು ಇಂದು ಸಿಎಂ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು. ಸಿಎಂ ಸಿದ್ದರಾಮಯ್ಯ ಅವರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಚಿವರಾದ ರಹೀಂ ಖಾನ್​, ಶರಣಪ್ರಕಾಶ್ ಪಾಟೀಲ್, ಈಶ್ವರ್ ಖಂಡ್ರೆ ಮತ್ತು ಶಾಸಕರು ಸಾಥ್ ನೀಡಿದರು.

ಈ ಕುರಿತು ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದು, ಕಲಬುರಗಿಯಲ್ಲಿ‌ ರೂ.377 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಆಸ್ಪತ್ರೆಯನ್ನು ನಾಳೆ ಉದ್ಘಾಟಿಸುತ್ತಿದ್ದೇನೆ. ಹೈದರಾಬಾದ್ – ಕರ್ನಾಟಕ ವಿಶೇಷ ಪ್ರಾತಿನಿಧ್ಯ 371J ದೊರೆತು ದಶಕ ಪೂರೈಸಿದ ನೆನಪಿಗಾಗಿ 7 ಐಸಿಯು ಕೊಠಡಿ, 4 ಜನರಲ್ ವಾರ್ಡ್, 13 ಸೆಮಿ ಸ್ಪೆಷಲ್ ವಾರ್ಡ್‌ಗಳನ್ನು ಒಳಗೊಂಡ 371 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ.ಇದು ರಾಜ್ಯದ ಮೂರನೇ ಸರ್ಕಾರಿ ಹೃದ್ರೋಗ ಆಸ್ಪತ್ರೆಯಾಗಿ ಲೋಕಾರ್ಪಣೆಗೊಳ್ಳುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ ಲಕ್ಷಾಂತರ ಜನರಿಗೆ ಅನುಕೂಲವಾಗುವ ನಿರೀಕ್ಷೆಯಿದೆ.

ಆಸ್ಪತ್ರೆಯ ವೈಶಿಷ್ಟತೆಗಳು

ಕಲಬುರಗಿಯಲ್ಲಿ‌ ರೂ.377 ಕೋಟಿ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಜಯದೇವ ಆಸ್ಪತ್ರೆಯನ್ನು ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸುತ್ತಿದ್ದು, ಹೈದರಾಬಾದ್ – ಕರ್ನಾಟಕ ವಿಶೇಷ ಪ್ರಾತಿನಿಧ್ಯ 371J ದೊರೆತು ದಶಕ ಪೂರೈಸಿದ ನೆನಪಿಗಾಗಿ 7 ಐಸಿಯು ಕೊಠಡಿ, 4 ಜನರಲ್ ವಾರ್ಡ್, 13 ಸೆಮಿ ಸ್ಪೆಷಲ್ ವಾರ್ಡ್‌ಗಳನ್ನು ಒಳಗೊಂಡ 371 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯನ್ನು ನಿರ್ಮಿಸಲಾಗಿದೆ.ಇದು ರಾಜ್ಯದ ಮೂರನೇ ಸರ್ಕಾರಿ ಹೃದ್ರೋಗ ಆಸ್ಪತ್ರೆಯಾಗಿ ಲೋಕಾರ್ಪಣೆಗೊಳ್ಳುತ್ತಿದ್ದು, ಕಲ್ಯಾಣ ಕರ್ನಾಟಕ ಭಾಗದ ಲಕ್ಷಾಂತರ ಜನರಿಗೆ ಅನುಕೂಲವಾಗುವ ನಿರೀಕ್ಷೆಯಿದೆ.

ಕಲ್ಯಾಣ ಕರ್ನಾಟಕದ ಕೇಂದ್ರ ಕಲಬುರಗಿಯಲ್ಲಿ ಕೆ.ಕೆ.ಆರ್.ಡಿ.ಬಿ.ಯ 302 ಕೋಟಿ ರೂ. ಸೇರಿ ಒಟ್ಟಾರೆ 327.17 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ 371 ಹಾಸಿಗೆ ಸಾಮರ್ಥ್ಯದ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಆಸ್ಪತ್ರೆಯ ಖಾಸಗಿ ಕಾರ್ಪೊರೇಟ್ ಆಸ್ಪತ್ರೆ ಮೀರಿಸುವ ಗುಣಮಟ್ಟದ ಸೇವೆ ಇಲ್ಲಿ ಸಾರ್ವಜನಿಕರಿಗೆ ಲಭ್ಯವಿದ್ದು, ನೂತನ ಆಸ್ಪತ್ರೆಯ ಸಾಮರ್ಥ್ಯಕ್ಕೆ ತಕ್ಕಂತೆ ಈಗಿರುವ 10 ಹೃದ್ರೋಗ ವೈದ್ಯರ ಜೊತೆಗೆ ಹೆಚ್ಚುವರಿಯಾಗಿ 21 ವೈದ್ಯರು, 120 ಸ್ಟಾಫ್ ನರ್ಸ್ ಸೇರಿದಂತೆ ಇತರೆ ಸಿಬ್ಬಂದಿ ನೇಮಕಾತಿಗೆ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಅದರಂತೆ ನೇಮಕಾತಿ ಪ್ರಕ್ರಿಯೆ ನಡೆಯಲಿದೆ.

ನೂತನ ಜಯದೇವ ಆಸ್ಪತ್ರೆಯಲ್ಲಿ 3 ಕ್ಯಾಥಲ್ಯಾಬ್, ಮೂರು ಅಪರೇಷನ್ ಥಿಯೇಟರ್, ಒಂದು ಹೈಬ್ರಿಡ್ ಓ.ಟಿ ಇರಲಿದೆ. ಎಕ್ಸ್ರೇ, ಇ.ಎಂ.ಆರ್.ಐ., ಬ್ಲಡ್ ಬ್ಯಾಂಕ್ ಸೇವೆ ಲಭ್ಯವಿರಲಿದೆ. 105 ಐ.ಸಿ.ಯು ಬೆಡ್, 120 ಜನರಲ್ ಬೆಡ್ ಸೇರಿದಂತೆ ಒಟ್ಟಾರೆ 371 ಹಾಸಿಗೆ ಸಾಮರ್ಥ್ಯ ಇದ್ದು, ಅತ್ಯಾಧುನಿಕ ಸೌಲಭ್ಯದೊಂದಿಗೆ ಬಿ.ಪಿ.ಎಲ್ ರೋಗಿಗಳಿಗೆ ಉಚಿತ ಮತ್ತು ಎ.ಪಿ.ಎಲ್. ರೋಗಿಗಳಿಗೆ ಶೇ.30ರ ರಿಯಾಯಿತಿ ದರದೊಂದಿಗೆ ಚಿಕಿತ್ಸೆ ಇಲ್ಲಿ ಸಿಗಲಿದೆ.

ಬೆಂಗಳೂರು, ಮೈಸೂರು ಬಿಟ್ಟರೆ ರಾಜ್ಯದಲ್ಲಿ ಮೂರನೇ ಸ್ವಂತ ಕಟ್ಟಡವನ್ನು ಕಲಬುರಗಿಯಲ್ಲಿ ಆಸ್ಪತ್ರೆ ಹೊಂದಲಿದ್ದು, ಬೆಂಗಳೂರು ಬಿಟ್ಟರೆ ಕಲಬುರಗಿ ಶಾಖಾ ಆಸ್ಪತ್ರೆಯಲ್ಲಿ ವಸ್ಕುಲರ್ ಸರ್ಜರಿ ಸೇವೆ ಸಹ ನೀಡಲು ಉದ್ದೇಶಿಸಲಾಗಿದೆ. ಇದು ಕಲ್ಯಾಣ ಕರ್ನಾಟಕ ಭಾಗದಲ್ಲಿಯೆ ಮೊದಲನೇಯದು ಎನ್ನುವ ಹೆಗ್ಗಳಿಕೆ.‌ನೂತನ ಆಸ್ಪತ್ರೆಯಲ್ಲಿ ನೀರಿನ ಕೊರತೆ ಎದುರಾಗದಂತೆ 7 ಲಕ್ಷ ಲೀ. ನೀರು ಸಾಮರ್ಥ್ಯ ಟ್ಯಾಂಕ್ ಸ್ಥಾಪಿಸಿದ್ದು, 11ಕೆ.ವಿ. ವಿದ್ಯುತ್ ಕೇಂದ್ರವನ್ನು 33 ಕೆ.ವಿ.ಗೆ ಮೇಲ್ದರ್ಜೇಗೇರಿಸಲಾಗಿದೆ.

ಜಯದೇವ ಕಲಬುರಗಿ ನೂತನ ಶಾಖೆಯ ವಿಶೇಷತೆಗಳು ಹೀಗಿವೆ:
❖ 371 ಹಾಸಿಗೆ ಸಾಮರ್ಥ್ಯದ ಕಟ್ಟಡ
❖ 3 ಕ್ಯಾಥ್‌ಲ್ಯಾಬ್‌ಗಳು
❖ 3 ಆಪರೇಷನ್ ಥಿಯೇಟರ್‌ಗಳು
❖ 1 ಹೈಬ್ರಿಡ್ OT
❖ 105 ICCU ಹಾಸಿಗೆಗಳು
❖ 120 ಸಾಮಾನ್ಯ ವಾರ್ಡ್ ಬೆಡ್‌
❖ ಅರೆ-ವಿಶೇಷ, ವಿಶೇಷ ಮತ್ತು ಡೀಲಕ್ಸ್ ವಾರ್ಡ್ ಹಾಸಿಗೆಗಳು, 12 ರಿಕವರಿ ಮತ್ತು 12 ಪೋಸ್ಟ್ ಆಪರೇಟಿವ್ ಹಾಸಿಗೆಗಳು
❖ ಕಾರ್ಡಿಯಾಲಜಿ, ಕಾರ್ಡಿಯೋಥೊರಾಸಿಕ್ ಸರ್ಜರಿ, ವ್ಯಾಸ್ಕುಲಾರ್‌ಶಸ್ತ್ರಚಿಕಿತ್ಸೆ, ಪೀಡಿಯಾಟ್ರಿಕ್ ಕಾರ್ಡಿಯಾಲಜಿ, ರೇಡಿಯಾಲಜಿ, 128 ಸ್ಲೈಸ್ CT ಸ್ಕ್ಯಾನ್, 1.5T MRI, ಅಲ್ಟ್ರಾಸೋನೋಗ್ರಫಿ, ಹೈಟೆಕ್ಪ್ಯಾಥಾಲಜಿ ಮತ್ತು ರಕ್ತ ಬ್ಯಾಂಕ್ ಸೇವೆ ದೊರಕಲಿದೆ.

Share. Facebook Twitter LinkedIn WhatsApp Email

Related Posts

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

2 Mins Read

ಪ್ರೀತಿಯ ಹಾದಿ ಹಿಡಿದ ಮಗಳು: ತಾಯಿಯ ಆತಂಕಕ್ಕೆ ಹೈಕೋರ್ಟ್ ನೀಡಿದ ತೀರ್ಪೇನು ಗೊತ್ತಾ?

2 Mins Read

ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಮಾಡುತ್ತಿದ್ದ ಹಮ್ರಾಜ್ ಶೇಖ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

2 Mins Read
Recent News

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

ಪ್ರೀತಿಯ ಹಾದಿ ಹಿಡಿದ ಮಗಳು: ತಾಯಿಯ ಆತಂಕಕ್ಕೆ ಹೈಕೋರ್ಟ್ ನೀಡಿದ ತೀರ್ಪೇನು ಗೊತ್ತಾ?

BIG NEWS: ವೈದ್ಯರು ವಕೀಲರಾಗಬೇಕಿದ್ದರೆ ಮೆಡಿಕಲ್ ರಿಜಿಸ್ಟ್ರೇಷನ್ ಕ್ಯಾನ್ಸಲ್ ಕಡ್ಡಾಯ: ಹೈಕೋರ್ಟ್ ಮಹತ್ವದ ಆದೇಶ

BIG NEWS: ಮಗಳಿಗೆ ಪತಿಗೆ ತಿಳಿಸದೆ ರಹಸ್ಯವಾಗಿ ಮದುವೆ ಮಾಡುವುದು ಕ್ರೌರ್ಯ: ಹೈಕೋರ್ಟ್ ಮಹತ್ವದ ತೀರ್ಪು

State News
KARNATAKA

Apple Store: ಬೆಂಗಳೂರಲ್ಲಿ ಎರಡನೇ ಸ್ಟೋರ್ ತೆರೆಯಲು ಆಪಲ್ ಸಿದ್ಧತೆ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಆಪಲ್ ಪ್ರಿಯರಿಗೆ ಮತ್ತೊಂದು ಸಿಹಿ ಸುದ್ದಿ ಸಿಗುವ ಲಕ್ಷಣಗಳು ಕಾಣಿಸುತ್ತಿವೆ. ಆಪಲ್ ಕಂಪನಿಯ ಅಧಿಕೃತ…

ಪ್ರೀತಿಯ ಹಾದಿ ಹಿಡಿದ ಮಗಳು: ತಾಯಿಯ ಆತಂಕಕ್ಕೆ ಹೈಕೋರ್ಟ್ ನೀಡಿದ ತೀರ್ಪೇನು ಗೊತ್ತಾ?

ಉಗ್ರ ಸಂಘಟನೆಗೆ ಯುವಕರ ನೇಮಕಾತಿ ಮಾಡುತ್ತಿದ್ದ ಹಮ್ರಾಜ್ ಶೇಖ್‌ಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್

2028ರಲ್ಲೂ ಕಾಂಗ್ರೆಸ್ ಜಯನಿಶ್ಚಿತ ಎಂದು ತಿಳಿದು ಬಿಜೆಪಿ ಹೌಹಾರುತ್ತಿದೆ- ಅರಣ್ಯ ಸಚಿವ ಈಶ್ವರ ಖಂಡ್ರೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.