ಬೆಂಗಳೂರು: ಸುಮಾರು 80 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾಗಿರುವ ಬೆಂಗಳೂರಿನ ಹೆಬ್ಬಾಳ ಹೊಸ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಉದ್ಘಾಟಿಸಿದ್ದಾರೆ.
ಇಂದು ಸಿಎಂ ಸಿದ್ದರಾಮಯ್ಯ ಈ ಮೇಲ್ಸೇತುವೆಯನ್ನು ಉದ್ಘಾಟಿಸಿದ್ದಾರೆ. ಈಗಾಗಲೇ 2 ದಿನಗಳ ಟ್ರಯಲ್ ರನ್ ನಡೆಸಲಾಗಿದೆ. ನಾಗವಾರದಿಂದ ಬರುವ ವಾಹನಗಳು ಸಿಗ್ನಲ್ ತಪ್ಪಿಸಿ ರ್ಯಾಂಪ್ ಮೂಲಕ ಸುಲಭವಾಗಿ ಹೋಗಲು ಈ ರಾಂಪ್ ಸಹಾಯ ಮಾಡುತ್ತದೆ. ಆದರೆ, ಇದರಿಂದ ಮೆಖ್ರಿ ಸರ್ಕಲ್ನಲ್ಲಿ ಟ್ರಾಫಿಕ್ ಜಾಮ್ ಹೆಚ್ಚಾಗಬಹುದು ಎಂದು ಟ್ರಯಲ್ ರನ್ನಲ್ಲಿ ತಿಳಿದುಬಂದಿದೆ.
700 ಮೀಟರ್ ಉದ್ದದ ಹೆಬ್ಬಾಳ ಪ್ಲೈ ಓವರ್ ಸುಮಾರು 80 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದೆ. ಈ ಫ್ಲೈಓವರ್ ಕೆ.ಆರ್ ಪುರಂ ಕಡೆಯಿಂದ ಮೇಖ್ರೀ ಸರ್ಕಲ್ವರೆಗೆ ನಿರ್ಮಾಣ ಮಾಡಲಾಗಿದೆ. ಇದರ ಕಾಮಗಾರಿಯು 2023ರಲ್ಲಿ ಆರಂಭ ಆಗಿದ್ದು, ಒಂದೂವರೆ ವರ್ಷಗಳ ಬಳಿಕ ಫ್ಲೈಓವರ್ ಕಾರ್ಯ ಪೂರ್ಣಗೊಂಡಿದೆ.