ಬೆಂಗಳೂರು : ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ, ಕೇಂದ್ರ ಸರ್ಕಾರ ಎಲ್ಲಾ ರಾಜ್ಯಗಳಲ್ಲೂ ಮಾಕ್ ಡ್ರಿಲ್ ನಡೆಸುವಂತೆ ಸೂಚನೆ ನೀಡಿತ್ತು. ಅದರಂತೆ ರಾಜ್ಯದಲ್ಲಿ ಮೂರು ಜಿಲ್ಲೆಗಳಲ್ಲಿ ಮಾಕ್ ಡ್ರಿಲ್ ನಡೆಸಲಾಗಿತ್ತು. ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಜಿಲ್ಲೆಗಳಲ್ಲೂ ಮಾಕ್ ಡ್ರಿಲ್ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಎಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಾಕ್ ಡ್ರಿಲ್ ಮಾಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ನಲ್ಲಿ ನಡೆಸಿದ ಸಭೆಯಲ್ಲಿ ಸೂಚನೆ ನೀಡಿದ್ದಾರೆ. ಡಿಸಿ, ಎಸ್ ಪಿ, ಪೊಲೀಸ್ ಆಯುಕ್ತರ ಜೊತೆಗೆ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದರು.
ಅಗತ್ಯ ವಸ್ತುಗಳ ಅದರ ಹೆಚ್ಚಳ ಆಗದಂತೆ ಅಧಿಕಾರಿಗಳು ನಿಗ ವಹಿಸಬೇಕು. ಅಕ್ರಮ ದಾಸ್ತಾನು ಕಾಳಸಂತೆಯ ಮೇಲೆ ನಿರಂತರವಾಗಿ ನಿಗಾವಹಿಸಬೇಕು. ಯುದ್ಧದ ಪರಿಸ್ಥಿತಿ ತಿಳಿಯಾಗುವವರೆಗೂ ಜನರಲ್ಲಿ ಜಾಗೃತಿ ಮೂಡಿಸಿ ಯುದ್ಧದ ಸಂದರ್ಭದಲ್ಲಿ ಜನ ಹೇಗೆ ರಕ್ಷಿಸಿಕೊಳ್ಳಬೇಕು ಎಂದು ಅವರಲ್ಲಿ ಜಾಗೃತಿ ಮೂಡಿಸಿ.ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಯಾವುದೇ ಪರಿಸ್ಥಿತಿ ಎದುರಿಸಲು ನಾವು ಸರ್ವಸಮದ್ಧರಾಗಿರಬೇಕು ರಾಜ್ಯಮಟ್ಟದಲ್ಲಿ ಮತ್ತು ಜಿಲ್ಲಾಮಟ್ಟದಲ್ಲಿ ಮಾರ್ಗಸೂಚಿ ಸಿದ್ಧಪಡಿಸಬೇಕು. ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಅಲ್ಲದೆ ಸುಳ್ಳು ಸುದ್ದಿ ಹರಡುವುದನ್ನು ತಪ್ಪಿಸಲು ಕಚ್ಚರ ವಹಿಸುವಂತೆ ಸೂಚಿಸಿದರು.